ನಟ ದೂದ್ ಪೇಡಾ ದಿಗಂತ್ ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.
“ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರಕ್ಕೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದು, ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.