ಗುಂಡ್ಲುಪೇಟೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಎಂ.ಗಣೇಶಪ್ರಸಾದ್, ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡಿ.ದೇವ
ರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ 36 ಮಂದಿ ಮಹಿಳೆಯರಿಗೆ ಸರ್ಕಾರದಿಂದ ನೀಡುವ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಗಿದೆ.
ಮಹಿಳೆಯರು ಇದರ ಸದುಪಯೋಗ ಪಡೆದು ಮನೆ ಜವಾಬ್ದಾರಿಯನ್ನು ನಿರ್ವಹಿಸಿ ಜೊತೆಗೆ ಆರ್ಥಿಕವಾಗಿ ಮುಂದೆ ಬರುವಂತೆ ಎಂದು ಸಲಹೆ ನೀಡಿದರು.ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಮಹಿಳೆಯರು ಸ್ವಾವಲಂಬನೆ ಜೀವನ ನಡೆಸಲು ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತಿದ್ದು ಇದನ್ನು ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಹೇಳಿದರು.
ಸಿದ್ದರಾಮಯ್ಯ ನೇತೃತ್ವದಕಾಂಗ್ರೆಸ್ ಸರ್ಕಾರ ಮಹಿಳೆಯರಹಾಗು ಆರ್ಥಿಕವಾಗಿ ಸಬಲರಾಗಬೇಕು ಎನ್ನುವ ಉದ್ದೇಶದಿಂದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಯಲ್ಲಿ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದ ಮಹಿಳೆಯರು ಇವುಗಳನ್ನು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮುಂದೆಯೂ ಸಹ ಕಾಂಗ್ರೆಸ್ ಮಹಿಳೆಯರ ಪರವಾಗಿ ಇರಲಿದೆ ಎಂದು ತಿಳಿಸಿದರು.
ಈ ವೇಳೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎಚ್.ಎ.ಶೋಭ, ಅಭಿವೃದ್ಧಿ ಅಧಿಕಾರಿ ಚೈತ್ರ, ಸಹಾಯಕ ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ, ಶಿವಣ್ಣ, ಸಿಬ್ಬಂದಿ ವರ್ಗದವರಾದ ರಾಜೇಂದ್ರ, ಮಂಟೇಸ್ವಾಮಿ, ಕಾಂಗ್ರೆಸ್ ಮುಖಂಡರಾದ ಪ್ರಭುಸ್ವಾಮಿ, ರಂಗಪ್ಪ, ಗುರುಶಾಂತು, ಸಿದ್ದಪ್ಪಾಜಿ, ಮೋಹನ್ ದಾಸ್, ಅರುಣ್ ಸೇರಿದಂತೆ ಇತರರು ಹಾಜರಿದ್ದರು.