ಬೆಂಗಳೂರು: ಮಹಾಲಕ್ಷಿ÷್ಮ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠ ವಾರ್ಡಿನ ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಬೆಂಗಳೂರು ಬುಲ್ಸ್ ಮಹಿಳಾ ಅಸೋಸಿಯೇಷನ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ನಡೆದ ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಗೆ ಸ್ಥಳೀಯ ಶಾಸಕರಾದ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾದದ್ದು, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಇಂದಿನ ಸೋಲೆ, ಮುಂದಿನ ಗೆಲುವಿಗೆ ಸೋಪಾನ. ತೀರ್ಪುಗಾರರು ನೀಡುವ ತೀರ್ಪಿಗೆ ಎಲ್ಲಾ ಕ್ರೀಡಾಪಟುಗಳು ಬದ್ಧರಾಗಿರಬೇಕು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಉನ್ನತ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು, ಮಹಿಳೆಯರು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸ್ವಾಗತಾರ್ಹಎಂದು ಕ್ರೀಡಾಪಟುಗಳಿಗೆ ಶುಭಕೋರಿದರು. ಇದೇ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಸ್.ಹರೀಶ್, ಸ್ಥಳೀಯ ಮುಖಂಡರಾದ ವೆಂಕಟೇಶ ಮೂರ್ತಿ, ಗಂಗಹನುಮಯ್ಯ ಮೊದಲಾದವರು ಉಪಸ್ಥಿತರಿದ್ದರು.



