ನೆಲಮಂಗಲ: ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದು ವರಿಷ್ಠರು. ಯಾರಿಗಾದರೂ ಬೇಸರವಿದ್ದರೆ ಅದನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಶಾಸಕ ಎಸ್ ಆರ್ ವಿಶ್ವನಾಥ್ ರವರು ಹಿರಿಯರು, ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ. ಕೆ ಸುಧಾಕರ್ ಹೇಳಿಕೆ ನೀಡಿದರು.
ತಾಲ್ಲೂಕಿನ ಕೆಂಪಲಿಂಗನಹಳ್ಳಿಯ ದೇವಾಂಗ ಶಾಖ ಮಠಕ್ಕೆ ಭೇಟಿಕೊಟ್ಟು, ಶ್ರೀ ಶ್ರೀ ದಯಾನಂದಪುರಿ ಸ್ವಾಮೀಜಿಗಳ ಆಶೀರ್ವಾದ ಪಡೆದು ನಂತರ ಮಾತನಾಡಿದ ಅವರು, ಇದು ಯಾವುದೇ ರಾಜಕೀಯ ಭೇಟಿಯಲ್ಲ. ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಖಾಸಗಿ ಭೇಟಿ ನೀಡಿದ್ದೇನೆ, ನಮ್ಮ ಸರ್ಕಾರವಿದ್ದಾಗ ಮುಖ್ಯಮಂತ್ರಿಗಳೊಂದಿಗೆ ಈ ಮಠಕ್ಕೆ ಭೇಟಿ ಕೊಟ್ಟಿದ್ದೆ, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನಿಮ್ಮ ಆಶೀರ್ವಾದ ಬೇಕೆಂದು ಸ್ವಾಮೀಜಿಗಳಲ್ಲಿ ಮನವಿ ಮಾಡಿದ್ದೇನೆ.
ಶಾಸಕ ಎಸ್ ಆರ್ ವಿಶ್ವನಾಥ್ ಹಿರಿಯರು4 ಬಾರಿ ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದಾರೆ, ಯಾವುದೇ ಅಸಮಾಧಾನವಿ ದ್ದರೂ ಬಗೆಹರಿಸಿಕೊಳ್ಳುತ್ತೇವೆ, ಮಾಜಿ
ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ಸಹ ಶಾಸಕರಾದ ವಿಶ್ವನಾಥ್ ಬಳಿಮಾತನಾಡುತ್ತೇನೆ, ಅವರನ್ನು ಪ್ರಚಾರಕ್ಕೆಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ, ವೈಯಕ್ತಿಕವಾಗಿ ಅತಿ ಶೀಘ್ರದಲ್ಲೆ ಶಾಸಕ ಎಸ್. ಆರ್. ವಿಶ್ವನಾಥ್ ಮನೆಗೆ ಭೇಟಿ ನೀಡುತ್ತೇನೆ ಎಂದರು.
ಕ್ಷೇತ್ರದಲ್ಲಿ ಒಳ್ಳೆಯ ವಾತಾವರಣವಿದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ದಲ್ಲಿ ಕಳೆದ ಬಾರಿಗಿಂತ ಅತಿ ಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ. ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯಲ್ಲ ನರೇಂದ್ರ ಮೋದಿ ಎಂದು ಎಲ್ಲರೂ ಕೆಲಸ ಮಾಡಬೇಕು, ದೇಶಕ್ಕೆ ಸದೃಢ ನಾಯಕ ಸಿಕ್ಕಿದ್ದಾರೆ, ಇಂತಹ ಕಾಲಘಟ್ಟದಲ್ಲಿ ನಮ್ಮ ವೈಯಕ್ತಿಕ ವಿಚಾರಗಳನ್ನು ಬದಿಗಿಟ್ಟು. ದೇಶದ ಭವಿಷ್ಯವನ್ನು ರೂಪಿಸುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು,, ಬದಲಾಗದಿದ್ದವರು ಮುಂದಿನ ದಿನಗಳಲ್ಲಿ ಬದಲಾಗುತ್ತಾರೆ ಎಂಬ ಆಶಾಭಾವನೆ ಇದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ ವಿ ನಾಗರಾಜ್, ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌದರಿ, ಎನ್ ಡಿ ಎ ಮಾಜಿ ಅಧ್ಯಕ್ಷ ಮಲ್ಲಯ್ಯ, ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಹೇಮಂತ್ ಕುಮಾರ್, ಬಿಜೆಪಿ ಮುಖಂಡ ಸಪ್ತಗಿರಿ ಶಂಕರ್ ನಾಯಕ್, ಸಿದ್ದರಾಜು, ಮಹಿಳಾ ಮೋರ್ಚಾ ತಾಲ್ಲೂಕು ಅಧ್ಯಕ್ಷೆ ಮಂಜುಳಾ ಸುರೇಶ್ .ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.