ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜನರ ಕೆಲಸಗಳನ್ನು ವಿಳಂಬ ವಾಗದಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಮಾಡಿದಾಗ ಜನಪ್ರತಿನಿಧಿಗಳಿಗೆ ಸಾರ್ವಜನಿಕ ದೂರುಗಳು ಕಡಿಮೆಯಾಗುತ್ತವೆ. ಆ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಅವರ ಸಮಸ್ಯೆಗಳನ್ನು ಸೌಹಾರ್ಧಿಕವಾಗಿ ಬಗೆಹರಿಸಿದಾಗ. ಇಲಾಖೆಗಳಿಗೆ ಗೌರವ ಬರುತ್ತದೆ ಎಂದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮನೆಗಳ ಇ ಸ್ವತ್ತು, ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಕಂದಾಯ ಇಲಾಖೆಯಲ್ಲಿ ಜಮೀನುಗಳ ಪಹಣಿ,ಪಟ್ಟ, ಖಾತೆ ಬದಲಾವಣೆ, ಜಮೀನಿನ ಬಂಡಿ ದಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೆನೆಗುದಿಗೆ ಬಿದ್ದಿರುವ.
ರೈತರ ಹಾಗೂ ಸಾರ್ವಜನಿಕರ ಕೆಲಸಗಳ ಬಗ್ಗೆ ದೂರುಗಳ ವಿಚಾರವಾಗಿ ಶಾಸಕ ಟಿ.ರಘುಮೂರ್ತಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ವಿಳಂಬಕ್ಕೆ ಕಾರಣ ಕೇಳಿ. ಶೀಘ್ರವಾಗಿ ಜನರ ಕೆಲಸಗಳನ್ನು ಮಾಡಿಕೊಡಲು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ರೇಹಾನ್ ಪಾಷಾ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್,ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರಾಧಾ ಉಮಾಕಾಂತ ರೆಡ್ಡಿ, ಉಪಾಧ್ಯಕ್ಷೆ ಶ್ರೀಮತಿ ಸುಧಮ್ಮ ಚಂದ್ರಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು,ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ತಿಪ್ಪೇಶ್ ರೆಡ್ಡಿ,ಮುಖಂಡರಾದ ಸುರೇಶ್ ಬಾಬು,ಪುರುಷೋತ್ತಮ್,ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸುತ್ತಮುತ್ತಲ ಗ್ರಾಮದ ಜನರು, ರೈತರು ಉಪಸ್ಥಿತರಿದ್ದರು.