ಬೆಂಗಳೂರು: ಬಳ್ಳಾರಿ ಗಲಭೆಗೆ ಸಂಬAಧಪಟ್ಟAತ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿದ ಬೆನ್ನಲ್ಲೆ ಇದೀಗ ಮಂಗಳೂರಿನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡುವ ಆರೋಪ ಕೇಳಿ ಬಂದಿದೆ.
ಮಂಗಳೂರಿನಲ್ಲಿ ಶಾಸಕ ವೈ. ಭರತ್ ಶೆಟ್ಟಿ ಈ ಗಂಭೀರ ಮಾಡಿದ್ದಾರೆ.
ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕುತ್ತಿರುವ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಮಂಗಳೂರಿನ ಪೊಲೀಸ್ ಆಯುಕ್ತ ಹಾಗೂ ಎಸ್.ಪಿ ಅವರನ್ನು ವರ್ಗಾವಣೆ ಮಾಡುವ ಮಾತು ಕೇಳಿಬಂದಿದೆ. ಗೋಹತ್ಯೆ, ಮರಳುದಂಧೆ, ಲವ್ಜಿಹಾದ್, ಅಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡದೆ ಕಾನೂನು ಕ್ರಮ ಜರುಗಿಸುತ್ತಿರುವ ಅಧಿಕಾರಿಗಳ ವರ್ಗಾವಣೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಎಸ್ಪಿ ಮತ್ತು ಪೊಲೀಸ್ ಕಮೀಷನರ್ ಅಧಿಕಾರ ಸ್ವೀಕರಿಸಿದ ಮೇಲೆ ಯಾವುದೇ ಅಹಿತಕರ ಘಟನೆಗೆ ಎಡೆಮಾಡಿಕೊಡದೆ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕುತ್ತಿದ್ದಾರೆ. ಅವರನ್ನು ವರ್ಗಾವಣೆ ಮಾಡಿ ಎಂದು ರಾಜಕಾರಣಿಗಳು ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸ್ಯಾಂಡ್ ಮಾಫಿಯಾ, ಬೀಪ್ ಮಾಫೀಯಾ ಅವರು ಬೆನ್ನು ಸರ್ಕಾರದ ಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇ ಆದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಆರೋಪಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯವರು ಬರೀ ಇತರದ ಹೇಳಿಕೆಗಳನ್ನು ನೀಡುವುದೇಅವರ ಕೆಲಸ. ಅವರ ಆರೋಪ ಮಾಡುತ್ತಲೇ ಇರಲಿ ಎಂದು ಹೇಳಿದ್ದಾರೆ.
ದಕ್ಷ ಅಧಿಕಾರಿಗಳವರ್ಗಾವಣೆ ಹುನ್ನಾರ ಮಂಗಳೂರಿನಲ್ಲಿ ಉತ್ತರ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಗಂಭೀರ ಆರೋಪ



