ನವದೆಹಲಿ: ಕಳೆದ ಅವಧಿಯಲ್ಲಿ ಪ್ರಹ್ಲಾದ್ ಜೋಶಿ ಮಾಡಿದ ಕಾರ್ಯಕ್ಷಮತೆಗೆ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪ್ರಹ್ಲಾದ್ ಜೋಶಿಗೆ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿರುವ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು.
ಕ್ಷೇತ್ರದ ಜನರು ವ್ಯಕ್ತಪಡಿಸುವ ಅಭಿಪ್ರಾಯ, ಕಾರ್ಯಕ್ಷಮತೆಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಪ್ರತಿ ಮನೆಯ ಜನರ ಪ್ರೀತಿಗೆ ಪಾತ್ರರಾಗಿದ್ದೀರಿ. ಕ್ಷೇತ್ರದಲ್ಲಿ ನಿಮ್ಮ ಪರಿಶ್ರಮದಿಂದ ಹೊಸ ದಾಖಲೆ ಸೃಷ್ಠಿಯಾಗುತ್ತದೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ.
ಕ್ಷೇತ್ರದ ಜನ ನಿಮ್ಮಲ್ಲಿ ನನ್ನನ್ನು ಕಾಣುತ್ತಿದ್ದಾರೆ. ಮತದಾರನ ದೃಷ್ಟಿಯಲ್ಲಿ ನೀವು ಕೂಡ ಒಬ್ಬ ನರೇಂದ್ರ ಮೋದಿ. ಜೋಶಿ 10 ವರ್ಷ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆಯಾಗಿದೆ ಎಂದಿರುವ ಪ್ರಧಾನಿಯವರು ಅವರ ಅಭಿವೃದ್ಧಿಯ ಕಾರ್ಯವನ್ನು ನಾನು ದೆಹಲಿಯಲ್ಲಿದ್ದುಕೊಂಡೇ ನೋಡಿದ್ದೇನೆ ಎಂದು ಶ್ಲಾಘಿಸಿ ಪತ್ರ ಬರೆದಿದ್ದಾರೆ.