ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಶೀಘ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿರುವ ಗೃಹ ಸಚಿವ ಅಮಿತ್ ಶಾ ಭಾನುವಾರ ಅಥವಾ ಸೋಮವಾರ ಸಚಿವ ಸಂಪುಟ ಪುನರ್ ರಚನೆಗೆ ಸಮಯ ಕೇಳಿದ್ದಾರೆ ಎಂದು ಹೇಳಲಾಗಿದೆ.ಹೊಸ ಸಂಪುಟದಲ್ಲಿ ಹಲವು ಮಂದಿ ಸಚಿವರು ಹಾಗೂ ಆರು ಮಂದಿ ರಾಜ್ಯಖಾತೆ ಸಚಿವರನ್ನು ಕೈ ಬಿಡಲಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಧರ್ಮೇಂದ್ರ ಪ್ರಧಾನ್ ಮತ್ತು ಹರ್ದೀಪ್ ಸಿಂಗ್ ಪುರಿ ಅವರನ್ನು ಸಚಿವ ಸಂಪುಟದಿಂದ ಹೊರಗಿಡ್ತಾರೆ ಎಂಬ ಚರ್ಚೆ ಆಗ್ತಿದೆ.



