ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಕಟಿಸಿದ್ದಾರೆ.ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಮೋದಿ, ಈ ಹೊಸ ನಿಯಮಗಳು ಮತ್ತು ಕಠಿಣ ಕ್ರಮಗಳ ಕುರಿತು ಇಂದು ನಡೆಯಲಿರುವ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಪ್ರಶ್ನೆಪತ್ರಿಕೆ ಸೋರಿಕೆ ಎನ್ನುವುದು ಸಾಮಾನ್ಯ ಅಥವಾ ಸಣ್ಣ ವಿಷಯವಲ್ಲ, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಡುವ ಕಷ್ಟ-ವೇದನೆ ನನಗೂ ಅರ್ಥವಾಗುತ್ತದೆ ಎಂದಿದ್ದಾರೆ.ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ಹೋರಾಟವನ್ನು ಇನ್ನಷ್ಟು ಬಿಗಿಗೊಳಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಕಳೆದ ಎರಡೂವರೆ ತಿಂಗಳಿನಿAದ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ದಂಧೆಯಲ್ಲಿ ಭಾಗಿಯಾಗಿದ್ದ ಮುಖ್ಯ ಅಪರಾಧಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಅವರು ಜೈಲಿನಲ್ಲಿದ್ದಾರೆ. ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗಬಾರದು ಎಂಬುದು ಸರ್ಕಾರದ ಮೊದಲ ಆದ್ಯತೆಯಾಗಿತ್ತು. ಹೀಗಾಗಿ, ಸರ್ಕಾರ ತನ್ನ ಸಂಪೂರ್ಣ ಶಕ್ತಿಯನ್ನು ಬಳಸಿ ಅಲ್ಪಾವಧಿಯಲ್ಲೇ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಜುಲೈ 19 ರಂದೇ ಫಲಿತಾಂಶವನ್ನು ಪ್ರಕಟಿಸಿದೆ.ನಾವು ಕೇವಲ ಇಷ್ಟಕ್ಕೇ ತೃಪ್ತರಾಗುವವರಲ್ಲ ಎಂದಿರುವ ಪ್ರಧಾನಿ, ಅಕ್ರಮ ಎಸಗಿದವರಿಗೆ ಅತ್ಯಂತ ಶೀಘ್ರ ಹಾಗೂ ಕಠಿಣ ಶಿಕ್ಷೆ ವಿಧಿಸಲು `ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ’ ಸ್ಥಾಪಿಸುವ ಕರಡು ಪ್ರಸ್ತಾಪವನ್ನು ಜಾರಿಗೆ ತರಲು ಇಲಾಖೆಗಳಿಗೆ ಸೂಚನೆ ನೀಡಿದ್ದರು. ತಡರಾತ್ರಿ ಇಲಾಖೆಗಳು ಈ ಕಾನೂನಿನ ಕರಡನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿವೆ.ಫಾಸ್ಟ್ ಟ್ರ್ಯಾಕ್ ಕೋರ್ಟ್ ಮತ್ತು ಕಠಿಣ ಶಿಕ್ಷೆಯ ಈ ಹೊಸ ಕರಡು ಮಸೂದೆಯ ಕುರಿತು ಕೇಂದ್ರ ಸಚಿವ ಸಂಪುಟ ಚರ್ಚಿಸಲಿದ್ದು, ಮುಂಗಾರು ಅಧಿವೇಶನದ ಎರಡನೇ ವಾರದಲ್ಲೇ ಈ ವಿಧೇಯಕವನ್ನು ಮಂಡಿಸಿ ಅಂಗೀಕರಿಸಲು ಪ್ರಯತ್ನಿಸಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.ಸೋಮವಾರದಿಂದ ಸಂಸತ್ತಿನ ದ್ವಿತೀಯ ವಾರದ ಕಲಾಪಗಳು ಪ್ರಾರಂಭವಾಗುತ್ತಿದ್ದು, ಆದಷ್ಟು ಬೇಗ ಈ ಮಸೂದೆಯನ್ನು ಮಂಡಿಸಿ ಅಂಗೀಕರಿಸಲು ಪ್ರಯತ್ನಿಸಲಾಗುವುದು. ಈ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯನ್ನು ಶೀಘ್ರವಾಗಿ ಮುಗಿಸಲು ಫಾಸ್ಟ್ ಟ್ರಾ÷್ಯಕ್ ಕೋರ್ಟ್ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಬಂಧನೆಗಳಿರಲಿವೆ.ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ಸಾಮಾನ್ಯ ವಿಷಯವಲ್ಲ. ಇದು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತೀವ್ರ ನೋವುಂಟು ಮಾಡುತ್ತದೆ ಎಂಬುದು ನನಗೂ ತಿಳಿದಿದೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗಬಾರದು ಎಂಬುದೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.



