ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿಯಾಗಿಯೇ ತಯಾರಿ ನಡೆಸುತ್ತಿದೆ. ಈ ಬಾರಿ 400ಕ್ಕಿಂತ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿರುವ ಎನ್ಡಿಎ ನಾನಾ ತಂತ್ರಗಳನ್ನು ಮಾಡುತ್ತಿದೆ. ಬಿಜೆಪಿ ಪಾಲಿಗೆ ಪ್ರಧಾನಿ ಮೋದಿ ಸ್ಟಾರ್ ಪ್ರಚಾರಕರು.
ಮೋದಿ ಹೆಸರು ಬಿಜೆಪಿಗೆ ಮತಬುಟ್ಟಿಯಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬಿಜೆಪಿ ಬೂತ್ ಅಧ್ಯಕ್ಷರ ಜೊತೆ “ನಮೋ ಆ್ಯಪ್ ಮೂಲಕ ಸಂವಾದ ನಡೆಸಲಿದ್ದಾರೆ.
ಬೂತ್ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂಜೆ 4.30ಕ್ಕೆ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಬೂತ್ ಅಧ್ಯಕ್ಷರು ಮಾತ್ರವಲ್ಲದೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೋರ್ಕಮಿಟಿ ಸದ್ಯರು, ಲೋಕಸಭಾ ಅಭ್ಯರ್ಥಿಗಳು ಮತ್ತು ಶಾಸಕರು ಭಾಗವಹಿಸಲಿದ್ದಾರೆ.