ಬೆಂಗಳೂರು: ಇದು ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ. ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುರವರಿದ ಶಕ್ತಿಗಳ ಪೈಕಿ ಒಂದಾಗಿದ ಎಂದು ಪ್ರಧಾನಿ ನರೇಂದ್ರ ಮೋದಿಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂಧನ ಸಪ್ತಾಹ ಉದ್ಘಾಟಿಸಿ ಉದ್ಘಾಟಿಸಿ ಮಾತನಾಡಿದ ಅವರು, ಐಎಂಎಫ್ 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (ಬ್ರೈಟ್ ಸ್ಪಾಟ್) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ ಎಂದರು.
ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ವಿಷಾದ ವ್ಯಕ್ತಪಡಿಸಿದರು. ಭೂಕಂಪ ಸಂತ್ರಸ್ತರಿಗೆ ಭಾರತವು ಸಾಧ್ಯವಾಗುವ ಎಲ್ಲ ರೀತಿಯಲ್ಲಿಯೂ ನೆರವಾಗಲಿದೆ ಎಂದು ಭರವಸೆ ನೀಡಿದರು.
ಅಡುಗೆಮನೆಗಳಲ್ಲಿ ಸುಲಭವಾಗಿ ಬಳಸಲು ಸಾಧ್ಯವಿರುವ ವಿಶಿಷ್ಟ ಟ್ವಿನ್ ಕುಕ್‍ಟಾಪ್ ಸೋಲಾರ್ ಕುಕ್ಕರ್ ಒಂದನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಇಂಡಿಯನ್ ಆಯಿಲ್ ಈ ಸೋಲಾರ್ ಕುಕ್ಕರ್‍ಗಳನ್ನು ಅಳವಡಿಸಿದೆ.
ಇಂಡಿಯನ್ ಆಯಿಲ್‍ನ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತ್ಯಾಜ್ಯ ಪೆಟ್ ಬಾಟಲಿಗಳಿಂದ ತಯಾರಿಸಿದ ಪೇಟ ಮತ್ತು ಹಾಫ್ ಕೋಟ್ ನೀಡಿದರು. ತ್ಯಾಜ್ಯ ಪೆಟ್ ಬಾಟಲಿಗಳಿಂದ ಸಶಸ್ತ್ರಪಡೆಗಳಿಗೆ ಸಮವಸ್ತ್ರ ರೂಪಿಸುವ ಯೋಜನೆಯನ್ನು ಇಂಡಿಯನ್ ಆಯಿಲ್ ರೂಪಿಸಿ, ಅನುಷ್ಠಾನಗೊಳಿಸುತ್ತಿದೆ.
Leave a Review