ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆಸಿಆರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಿಷಯ ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಕೆಸಿಆರ್ ಅವರು ಬೇಗ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ.
“ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ದುಃಖಿತನಾಗಿದ್ದೇನೆ.ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೆ ಕವಿತಾ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರಿಗೆ ಸಣ್ಣ ಗಾಯವಾಗಿದೆ ಮತ್ತು ಪ್ರಸ್ತುತ ತಜ್ಞರ ಆರೈಕೆಯಲ್ಲಿದ್ದಾರೆ. ಬೆಂಬಲ ಮತ್ತು ಶುಭಾಶಯಗಳ ಮಹಾಪೂರದಿಂದ, ತಂದೆ ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗುತ್ತಾರೆ. ಎಲ್ಲಾ ಪ್ರೀತಿಗೆ ಕೃತಜ್ಞರಾಗಿರುತ್ತೇನೆ ಎಂದು ಹೇಳಿದ್ದಾರೆ.
ಕೆಸಿಆರ್ ಗುರುವಾರ ರಾತ್ರಿ ತಮ್ಮ ಫಾರ್ಮ್ಹೌಸ್ನಲ್ಲಿ ಗಾಯಗೊಂಡಿದ್ದರಿಂದ ಹೈದರಾಬಾದ್ನ ಯಶೋಧಾ ಆಸ್ಪತ್ರೆಗೆ ದಾಖಲಿಸಲಾಗಿದೆ.