This is the title of the web page
This is the title of the web page

ರಾಜ್ಯಕ್ಕೆ ಮೋದಿ ಆಗಮನ

ಬೆಂಗಳೂರು: ಇಂದು ಬಿಜೆಪಿಯ ಮಹಾಸಂಗಮ ಕಾರ್ಯಕ್ರಮ ಸೇರಿದಂತೆ ಬೆಂಗಳೂರು ಚಿಕ್ಕಬಳ್ಳಾ ಪುರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಳಗ್ಗಿ 10.25ರ ಸುಮಾರಿಗೆ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ, ವಸತಿಸಚಿವ ವಿ. ಸೋಮಣ್ಣ ಅವರು ಸ್ವಾಗತಿಸಿದರು.

ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಸೇನಾ ಹೆಲಿಕಾಫ್ಟರ್‍ನಲ್ಲಿ ಮೋದಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಗೆ ಭೇಟಿ ನೀಡಿದರು. ಮುದ್ದೇನಹಳ್ಳಿಯ ಬಳಿಯಿರುವ ವಿಶ್ವೇಶ್ವರಯ್ಯ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
ತದನಂತರ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದು ಹೇಳಿದರಲ್ಲದೇ ಸತ್ಯ ಸಾಯಿಬಾಬಾ ಹಾಗೂ ತಮ್ಮ ನಡುವೆ ನಿಕಟಸಂಪರ್ಕವಿತ್ತು ಎಂದು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಆರೋಗ್ಯದ ಜತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿ ಎಂದು ಹೇಳಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ವೈಟ್‍ಫೀಲ್ಡ್ ಕೆ.ಆರ್.ಪುರಂ ನಡುವಿನ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಪ್ರಯಾಣ ಮಾಡಿದರು.