ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಜ್ಞಾನ ಅತೀ ಅವಶ್ಯಕ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಪ್ರಮುಖ್ಯತೆ ನೀಡಬೇಕು ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮಾಜಶಾಸ್ತç ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ ನಿರ್ಮಲಾ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ತಿಳಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾಥಿ ðಗಳಿಗೆ ನೀಡುವ ಫ್ರೆಶರ್ಸ್ ಡೇ (ನವ ಚಿಗುರು ಕಾರ್ಯಕ್ರಮ)ದಲ್ಲಿ ಮಾತನಾಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಶಿಸ್ತುನಿಂದ ಅಧ್ಯಯನ ನಡೆಸಿದರೆ, ಜೀವ ನದಲ್ಲಿ ಯಶಸ್ವಿ ಕಂಡುಕೊಳ್ಳಲು ಸಾಧ್ಯ ಎಂದರು.
ಬೆAಗಳೂರು ನಗರ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಐ.ಎ.ಎಸ್ ಸೇರಿದಂತೆ ಇತರೆ ತರಬೇತಿಗಳು ಉಚಿತವಾಗಿ ನೀಡಲಾಗುತ್ತಿದ್ದು, ಈ ಎಲ್ಲಾ ರೀತಿಯ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಪೋಷಕರಿಗೆ ಹಾಗೂ ಉಪನ್ಯಾಸಕರಿಗೆ ಕೀರ್ತಿ ತರುವ ಕೆಲಸ ವಿದ್ಯಾರ್ಥಿಗಳು ಮಾಡಬೇಕು ಎಂದು ವಿದ್ಯಾರ್ಥಿ ಗಳಿಗೆ ಕಿವಿ ಮಾತು ತಿಳಿಸಿದರು. ಮತ್ತೊರ್ವ ಉಪನ್ಯಾಸಕಿ ಡಾ.ಬಿ.ಸಿ. ಸವಿತಾ ಅವರು ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿರುವ ನಾವುಗಳು ಎಲ್ಲ ಕೋರ್ಸ್ ಗಳು ಕಲಿತು ಸಮಾಜದಲ್ಲಿ ಮುನ್ನಡೆಯಬೇಕು ಎಂದರು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ವಿದ್ಯಾರ್ಥಿಗಳು ಈ ದಿನದಿಂದಲ್ಲೇ ಉತ್ತಮ ತಯಾರಿ ನಡೆಸುವುದು ಅತ್ಯಗತ್ಯ. ಸಾಧನೆಗೆ ಬೇಕಾಗಿರುವುದು ನಿರಂತರ ಪ್ರಯತ್ನ, ಸತತ ಅಧ್ಯಯನ, ಗುರುಗಳ ಮಾರ್ಗದರ್ಶನ ಪಡೆದು ಮುನ್ನಡೆಯಬೇಕು ಎಂದರು. ಮಾತೋರ್ವ ಉಪನ್ಯಾಸಕರಾದ ಡಾ.ಡಿ.ಸದನಂದ ಅವರು ಮಾತನಾಡಿ, ಶೈಕ್ಷಣಿಕ ಪ್ರಗತಿಯೊಂದಿಗೆ ವಿದ್ಯಾರ್ಥಿಗಳು ಸುಸಂಸ್ಕöÈತಿ ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳೆಲ್ಲರೂ ಕಾಲೇಜಿನಲ್ಲಿ ದೊರೆಯುವ ಉತ್ತಮವಾದ ಸೌಲಭ್ಯಗಳು ಹಾಗೂ ಹಿರಿಯ ಪ್ರಾಧ್ಯಾಪಕರ ಸೇವೆಯನ್ನು ಸಂಪೂರ್ಣವಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿ ಸುವುದು ಅತ್ಯಗತ್ಯ ಎಂದರು. ಈ ಕಾರ್ಯಕ್ರಮದಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು, ಅವರು ತಮ್ಮ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದರು. ಉಪನ್ಯಾಸಕರಾದ ಎಂ.ಹೆಚ್.ಕವನ, ಆರ್.ಕೆ.ನಾಗರಾಜ್, ಡಿ.ಎನ್.ಪ್ರಕಾಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು



