ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಬಸ್ ಡಿಕ್ಕಿಯಾಗಿ ೨೦ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಾನಸಗೇರಿಯಲ್ಲಿ ನಡೆದಿದೆ.
ಕಲಘಟಗಿಯಿಂದ ಹಳಿಯಾಳಕ್ಕೆ ತೆರಳ್ತಿದ್ದ ಬಸ್ ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸೇರಿ ೨೦ ಜನರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಚಾಲಕ ೮ ವಿದ್ಯಾರ್ಥಿನಿಯರು, ಇಬ್ಬರು ಶಾಲಾ ಮಕ್ಕಳಿಗೆ ಗಾಯಗಳಾಗಿವೆ.



