ಹನೂರು: ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಿ ಅವರನ್ನು ಓದಲು ಪ್ರೇರಣೆ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಮಹೇಶ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯಿತಿ ಮಹಿಳ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಮಕ್ಕಳ ರಕ್ಷಣ ಘಟಕದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.ಹೆಣ್ಣು ಈ ಸಮಾಜದ ಕಣ್ಣು ಹೆಣ್ಣುವಿಲ್ಲದೇ ಈ ಜೀವನವೇ ನಶ್ವರ ಅಂತಹ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ ಅಂತಹ ಸಂದರ್ಭದಲ್ಲಿ ತಾವು ಮಕ್ಕಳ ಸಹಾಯವಾಣಿಯನ್ನು ಸಂಪರ್ಕ ಮಾಡಬಹುದು ಜೊತೆಗೆ ಹೆಣ್ಣು ಮಕ್ಕಳು ಅಕ್ಷರ ಕಲಿತರೆ ಇಡೀ ಕುಟುಂಬವೆ ಕಣ್ಣು ತೆರೆದಂತೆ ಎಂದರು.
ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಸುರೇಶ್ ಮಾತನಾಡಿ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ನಮಲ್ಲಿ ಬೇರು ಬಿಟ್ಟಿರುವ ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಯನ್ನು ತೊಲಗಿಸಬೇಕು ಇಲ್ಲವಾದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಅಸಾಧ್ಯ ಎಂದರು.ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಿದ್ದಶೆಟ್ಟಿ ಮಾತನಾಡಿ ಜಿಲ್ಲಾ ಮಕ್ಕಳ ರಕ್ಷಣ ಘಟಕದಲ್ಲಿ ವಿವಿಧ ರೀತಿಯಲ್ಲಿ ಮಕ್ಕಳಿಗೆ ಅನುಕೂಲಗಳಿದೆ ಅಂತಹ ಮಕ್ಕಳಿದ್ದರೆ ಸದುಪಯೋಗ ಮಾಡಿಕೊಳ್ಳಿ ಎಂದರು.ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಅಧಿಕಾರಿ ನಿಂಬೇಶ್, ಹಾಗೂ ವಿವಿಧ ಗ್ರಾಮಗಳ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.