ಕನಕಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸ್ಥಳದಲ್ಲೇ ಸಂಸದ ಡಾ.ಸಿ.ಎನ್. ಮಂಜುನಾಥ್ ಪ್ರಥಮ ಚಿಕಿತ್ಸೆ ಮಾಡಿದ ಘಟನೆ ನಡೆದಿದೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದು ಗಾಯಾಳುಗಳನ್ನು ಡಾ.ಸಿ.ಎನ್. ಮಂಜುನಾಥ್ ಅವರು ಆಸ್ಪತ್ರೆಗೆ ಕಳುಹಿಸಿದ ಘಟನೆ ಜನರ ಪ್ರಶಂಸೆಗೆ ಪಾತ್ರವಾಗಿದೆ.
ಕನಕಪುರ-ಸಾತನೂರು ಮಾರ್ಗ ಮಧ್ಯೆ ಅಪಘಾತ ನಡೆದಿದ್ದು, ಈ ಸಂದರ್ಭದಲ್ಲಿ ಓರ್ವ ಪುರುಷ ಮತ್ತು ಮಹಿಳೆಗೆ ಗಾಯಗಳಾಗಿದ್ದವು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಂಸದರಾದ ಡಾ.ಸಿ.ಎನ್. ಮಂಜುನಾಥ್ ಅವರು ಪ್ರಯಾಣ ಮಾಡುತ್ತಿದ್ದರು.
ಅಪಘಾತ ಆಗಿರುವುದನ್ನು ಕಂಡು ವಾಹನ ನಿಲ್ಲಿಸಿ ಗಾಯಾಳುಗಳನ್ನು ಪರೀಕ್ಷಿಸಿದ ಅವರು, ಕೂಡಲೆ ಅವರಿಗೆ ರಸ್ತೆಯಲ್ಲಿಯೇ ಪ್ರಥಮ ಚಿಕಿತ್ಸೆ ಮಾಡಿ, ಅಟೋದಲ್ಲಿ ಆಸ್ಪತ್ರೆಗೆ ಕಳುಹಿಸಿ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮಂಜುನಾಥ್ ಸೂಚಿಸಿದ್ದಾರೆ.