ಬೆಂಗಳೂರು: ಕರ್ನಾಟಕ ಸರ್ಕಾದ ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರನ್ನು ಇಂದು ಬೆಳಗ್ಗೆ ಅವರ ಗೃಹ ಕಚೇರಿಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಹೊನ್ನಾಳಿ- ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದ ಸಂಧರ್ಭದಲ್ಲಿ ಏತ ನೀರಾವರಿ ಯೋಜನೆಗೆ ರೂ.519 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿ ಹಣ ಬಿಡುಗಡೆ ಮಾಡಿದ್ದು ಮುಕ್ತಾಯದ ಹಂತದಲ್ಲಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಳಿಸುವಂತೆ ವಿನಂತಿ ಮಾಡಿದ್ದಾರೆ.
ಇದರ ಜೊತೆಗೆ ಹೊನ್ನಾಳಿ ನಗರದ ಸಾರ್ವಜನಿಕರ ಮಠದ ಕೆರೆ ಅಭಿವೃದ್ಧಿ, ಸೌಂದರ್ಯೀಕರಣ, ವಿದ್ಯುತ್ ದೀಪ ಅಳವಡಿಕೆ, ಉದ್ಯಾನವನ ಹಾಗೂ ಯೋಗವನ ನಿರ್ಮಾಣಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ ರೂ. 14.40 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿಸಿದ್ದು, ಈ ಕಾಮಗಾರಿ ಬಾಕಿ ಇದ್ದು ತಕ್ಷಣ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ವಿನಂತಿ ಮಾಡಿದ್ದಾರೆ.ಇನ್ನು ಡಿ.ಕೆ ಶಿವಕುಮಾರ್ ಅವರು ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದು, ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ರೇಣುಕಾಚಾರ್ಯ ತಿಳಿಸಿದ್ದಾರೆ.
ಡಿಕೆಶಿ ಭೇಟಿಯಾದ ಎಂ.ಪಿ. ರೇಣುಕಾಚಾರ್ಯ!



