ಹೊಸಕೋಟೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ಅವರು ತಮ್ಮ ಕಾರ್ಯಕರ್ತರ ಜೊತೆ ತೆರಳಿ ಚುನಾವಣಾಧಿಕಾರಿಗೆ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಕೋಲಾರದ ಕುರುಡುಮಲೆ, ಹಾಗೂ ಹೊಸಕೋಟೆ ನಗರದ ಇತಿಹಾಸ ಪ್ರಸಿದ್ದ ಶ್ರೀ ಅವಿಮುಕ್ತೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಉಮೇದುವಾರಿಕೆ ನಂತರ ಸುದ್ದಿಗಾರರ ಜೊತೆ ಅಭ್ಯರ್ಥಿ ಎಂಟಿಬಿ ನಾಗರಾಜ್ ಮಾತನಾಡಿ ಹಿಂದಿನ ಉಪಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮೂರು ಜನ ಅಭ್ಯರ್ಥಿಗಳಾದ ಹಿನ್ನೆಲೆಯಲ್ಲಿ ನನಗೆ ಸೋಲಾಯಿತು. ಆದರೆ ಈ ಭಾರಿ ಮತದಾರರು ಸಾಕಷ್ಟು ಪ್ರಬುದ್ದರಾಗಿದ್ದು ನನ್ನ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿಗೆ ಮತ ನೀಡಲಿದ್ದಾರೆ. ಎಂದರು.
ಎಂಟಿಬಿ ನಾಗರಾಜ್ ಅವರು ಉಮೇದುವಾರಿಕೆ ಸಲ್ಲಿಕೆ ವೇಳೆ 1510 ಕೋಟಿ ರೂ.ಗಳಷ್ಟು ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಕಳೆದ 2019ರ ಉಪಚುನಾವಣೆ ವೇಳೆ 1015 ಕೋಟಿ ರೂ.ಗಳ ಆಸ್ತಿ ಘೋಷಣೆ ಮಾಡಿದ್ದ ಎಂಟಿಬಿ ನಾಗರಾಜ್ ಅವರು 2023ರ ಚುನಾವಣೆ ವೇಳೆಗೆ 495 ಕೋಟಿ ರೂ.ಗಳಷ್ಟು ಆಸ್ತಿಯನ್ನು ಹೆಚ್ಚಿಸಿಕೊಂಡಿದ್ದಾರೆ.
ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ. ಮಂಜುನಾಥ್, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಸತೀಶ್, ಎಂಟಿಬಿ ನಾಗರಾಜ್ ಪುತ್ರ ನಿತೀಶ್ ಪುರುಷೋ ತ್ತಮ್, ಬಿಜೆಪಿ ಮುಖಂಡರಾದ ಕೋಡಿಹಳ್ಳಿ ಜನಾರ್ಧನ್ ಹಾಜರಿದ್ದರು
Leave a Review