ಅರ್ಜುನ್ ಸರ್ಜಾ ಹಾಗೂ ಐಶ್ವರ್ಯ ರಾಜೇಶ್ ಮಫ್ತಿ ಪೊಲೀಸ್ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ ಚಿತ್ರ ನವೆಂಬರ್ ೨೧ ಕ್ಕೆ ಬರ್ತಿದೆ. ದಿನೇಶ್ ಲೆಟ್ಚುಮನನ್ ನಿರ್ದೇಶನದ
ಚೊಚ್ಚಲ ಚಿತ್ರ ಇದಾಗಿದೆ. ಜಿ.ಎಸ್. ಆರ್ಟ್್ಸ ನಿರ್ಮಿಸಿರುವ ಈ ಚಿತ್ರವನ್ನು ನಿರ್ಮಾಪಕ ಜಿ. ಅರುಲ್ ಕುಮಾರ್ ಪ್ರಸ್ತುತಪಡಿಸಿದ್ದಾರೆ. ಮಫ್ತಿ ಪೊಲೀಸ್ ಕ್ರೆöÊಂ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಈ ಚಿತ್ರದ ಮೂಲಕ ಕಾನೂನನ್ನು ನ್ಯಾಯದಿಂದ ಮೀರಿಸಬಹುದು. ನ್ಯಾಯವನ್ನು ನೀತಿಯಿಂದ ಮೀರಿಸಬಹುದು. ಆದರೆ ಅಂತಿಮ ಲೆಕ್ಕಾಚಾರದಲ್ಲಿ ನೀತಿ ಮಾತ್ರ ಗೆಲ್ಲುತ್ತದೆ ಎಂಬ ಎಳೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ.
ಅರ್ಜುನ್ ಸರ್ಜಾ, ಐಶ್ವರ್ಯ ರಾಜೇಶ್ ಜೊತೆಗೆ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಅಭಿರಾಮಿ, ರಾಮ್ಕುಮಾರ್, ಜಿ.ಕೆ. ರೆಡ್ಡಿ, ಪಿ.ಎಲ್. ತೇನಪ್ಪನ್, ಲೋಗು, ಬರಹಗಾರ-ನಟ ವೇಲಾ ರಾಮಮೂರ್ತಿ, ತಂಗದುರೈ, ಪ್ರಾಂಕ್ಸ್ಟರ್ ರಾಹುಲ್, ಒ.ಎ.ಕೆ. ಸುಂದರ್ ಸೇರಿದAತೆ ಹಲವರು ನಟಿಸಿದ್ದಾರೆ.ಸರವಣನ್ ಅಭಿಮನ್ಯು ಛಾಯಾಗ್ರಹಣ ನಿರ್ವಹಿಸುತ್ತಿದ್ದು,
ಆಶಿವಗನ್ ಸಂಗೀತ ನೀಡಿದ್ದಾರೆ. ಲಾರೆನ್ಸ್ ಕಿಶೋರ್ ಸಂಕಲನ ಚಿತ್ರಕ್ಕಿದೆ.



