ಬೆಂಗಳೂರು: ಸದ್ಯ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ ಎರಡನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಓಟ ಮುಂದುವರಿಸಿದ್ದು, ಗುಜರಾತ್ ಜೈಂಟ್ಸ್ ತಂಡವನ್ನು ಐದು ವಿಕೆಟ್ಗಳಿಂದ ಸೋಲಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 11 ಎಸೆತಗಳು ಬಾಕಿ ಇರುವಾಗಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಸತತ ಎರಡನೇ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಎಂಐ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 9 ವಿಕೆಟ್ ನಷ್ಟಕ್ಕೆ ನಿಗದಿತ 20 ಓವರ್ಗಳಳ್ಲಿ 126 ರನ್ಗಳಿಸುವ ಮೂಲಕ ಸಾಧಾರಣ ಮೊತ್ತವನ್ನು ಕಲೆಹಾಕಿತು. ಜಿಜಿ ನೀಡಿದ್ದ 127 ರನ್ಗಳ ಗುರಿ ಬೆನ್ನತ್ತಿದ್ದ ಎಂಐ ಹರ್ಮನ್ಪ್ರೀತ್ ಕೌರ್ ಅವರ ಅಜೇಯ 46 ರನ್ಗಳ ನೆರವಿನಿಂದ ಗೆಲುವು ಸಾಧಿಸಿತು.
ಅಮೆಲಿಯಾ ಕೆರ್ ನಾಲ್ಕು ವಿಕೆಟ್ ಕಬಳಿಸಿದರೆ, ಶಬ್ನಿಮ್ ಇಸ್ಮಾಯಿಲ್ ಮೂರು ವಿಕೆಟ್ ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ನೆರವಾದರು. ಜಿಜಿ ಪರ ತನುಜಾ ಕನ್ವರ್ 28 ರನ್ಗಳಿಸಿದರು.ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಮ್ಮ ಡಬ್ಲ್ಯುಪಿಎಲ್ 2024 ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಈ ವಾರದ ಆರಂಭದಲ್ಲಿ ಗೆಲುವಿನ ಶುಭಾರಂಭ ಮಾಡಿತ್ತು.
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಒಂದು ಎಸೆತದಲ್ಲಿ ಐದು ರನ್ಗಳ ಅಗತ್ಯವಿದ್ದಾಗ ಎಸ್ ಸಜನಾ ಸಿಕ್ಸರ್ ಸಿಡಿಸುವ ಮೂಲಕ ಭರ್ಜರಿ ಜಯ ಸಾಧಿಸಲು ನೆರವಾದರು. ಈ ಮೂಲಕ ಮುಂಬೈ ಇಂಡಿಯನ್ಸ್ ಆರು ವಿಕೆಟ್ಗಳ ಜಯ ಸಾಧಿಸಿತು.
ಮತ್ತೊಂದೆಡೆ, ಈ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ತಂಡಕ್ಕೆ ಇದು ಮೊದಲ ಪಂದ್ಯವಾಗಿದೆ.