ಬೆಂಗಳೂರು: ಇದುವರೆಗೂ ಮುಖ್ಯಮಂತ್ರಿ ಬದಲಾವಣೆಗಾಗಿ ನಡೆದ ರಾಜಕೀಯ ಬೆಳವಣಿಗೆಗೆ ತೆರೆ ಬಿದ್ದ ಕೂಡಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ಎಂಬುದು ಪಕ್ಷದ ವಲಯದಲ್ಲಿ ಚರ್ಚೆ ನಡೆಯತೊಡಗಿದೆ.
ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಪಿಡಬ್ಯೂಡಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿ ತಾವು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಒಲವು ವ್ಯಕ್ತಪಡಿಸಿತ್ತು ಬಂದಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಸಿದ್ದರಾಮಯ್ಯ ಪ್ರಕಟಿಸಿದ ಕೂಡಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕೂಡ ನಡೆಯುತ್ತದೆ ಎಂಬ ಕೂಗು ಕೇಳಿಬಂತು ಇದರ ಬೆನ್ನಲ್ಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸತೀಶ್ ಅವರಿಗೆ ದೂರವಾಣಿ ಕರೆ ಮೂಲಕ ಪಕ್ಷದ ರಾಜ್ಯಾಧ್ಯಕ್ಷರಾಗಿ ಎಂದು ಹೇಳಿದ ಕೂಡಲೇ ತಮಗೆ ಅಧ್ಯಕ್ಷ ಸ್ಥಾನದ ಜತೆಗೆ ಸಚಿವ ಸ್ಥಾನವೂ ನೀಡಬೇಕು ಎಂದು ಕೋರಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಇದೀಗ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಕೂಡ ಮುನ್ನಲೆಗೆ ಬಂದಿದೆ.
ಬಿ.ಕೆ.ಹರಿಪ್ರಸಾದ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಪಕ್ಷದ ವಲಯದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆ ಇದೀಗ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆಯೂ ಯಾರನ್ನು ನೇಮಕ ಮಾಡಬೇಕು ಎಂದು ಮುಖಂಡರು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತೊಂದು ಹೆಸರು ಮುನ್ನಲೆಗೆ



