ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ಬೆಳಕಿಗೆ ಬಂದಿದ್ದು, ಅನೈತಿಕ ಸಂಬAಧ ಶಂಕೆಯಿAದ ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹಚ್ಚಿರುವಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬAಧ ಬಗ್ಗೆ ಸಂಶಯ ವ್ಯಕ್ತಪಡಿಸಿದ ಗಂಡ ಹೆಂಡತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟ ಘಟನೆ ನಡೆದಿದೆ.
ನಿಂಗಣ್ಣ (೨೮) ಎಂಬಾತ ತನ್ನ ಪತ್ನಿ ಸುನೀತಾ (೨೫) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ ನಿಂಗಣ್ಣನಿಗೂ ಸುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.