ಬೆಂಗಳೂರು ನಗರ ಜಿಲ್ಲೆ: ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ಡಿಸೆಂಬರ್ 11 ರಿಂದ 16 ರವರೆಗೆ ಅಣಬೆ ಬೇಸಾಯ (Production technogy of Mushroom) ಬಗ್ಗೆ ನಗರದ ಸಾರ್ವಜನಿಕರಿಗೆ, ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಂದು ವಾರದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವರು ಸಾಮಾನ್ಯ ವರ್ಗದವರಿಗೆ ರೂ.1000/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಿಪಿಎಲ್ ಕಾರ್ಡ್ ಹೊಂದಿದವರು ಹಾಗೂ ವಿದ್ಯಾರ್ಥಿಗಳು ರೂ.500 ಗಳ ಶುಲ್ಕವನ್ನು ಪಾವತಿಸಿ ನೋಂದಾಯಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9449833153, 9066764248, 9399813893 ಅಥವಾ ಇ-ಮೇಲ್: [email protected] ಅಥವಾ [email protected] ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಲ್ಲಿ ತಿಳಿಸಿದ್ದಾರೆ.