ಮೈಸೂರು:ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದ್ದಾರೆ.
ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಇಡೀ ಕುಟುಂಬವೇ ಹಾಜರಾಗಿದೆ. ಖಾಸಗಿ ಹೋಟೆಲಿನಿಂದ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಆಗಮಿಸಿದರೆ ಸಿಎಂ ಮತ್ತು ಸಚಿವರು ಐರಾವತ ಬಸ್ಸಿನಲ್ಲಿ ಆಗಮಿಸಿದರು.
ಜಾನಪತ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿದವು. ನಂತರ ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಭಾಗಿಯಾಗಿದ್ದರು.