ಕೋಮಲ್ ಕುಮಾರ್, ಮೇಘನಾ ರಾಜ್, ಅನುಷಾ ರೈ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ `ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’
ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
`ಸAಗೀತ ಬಾರ್ ಅಂಡ್ ರೆಸ್ಟೋರೆಂಟ್’ ಚಿತ್ರಕ್ಕೆ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಆಕ್ಷನ್-ಕಟ್ ಹೇಳುತ್ತಿದ್ದು, ವಿಕಾಸ್ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಎರಡು ಹಂತಗಳಲ್ಲಿ 75 ದಿನಗಳ ಕಾಲ `ಸಂಗೀತಾ ಬಾರ್ ಅಂಡ್ ರೆಸ್ಟೋರೆಂಟ್’ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಮಲೆನಾಡು ಭಾಗದಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಚಿತ್ರೀಕರಣಕ್ಕಾಗಿ ಕುಂದಾಪುರದ ವಾಲ್ತೂರು ಗ್ರಾಮದಲ್ಲಿ ಏಳು ವಿಭಿನ್ನ ವಿನ್ಯಾಸದ ಬೃಹತ್ ಸೆಟ್ಗಳನ್ನು ನಿರ್ಮಿಸಿ, ಅದರಲ್ಲಿ ಚಿತ್ರದ ಬಹುಭಾಗದ ಚಿತ್ರೀಕರಣವನ್ನು ನಡೆಸಲಾಗಿದೆ.
ಅಂದಹಾಗೆ, ಈ ಸಿನಿಮಾದ ಹೆಸರು `ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಅಂತಿದ್ದರೂ, ಈ ಒಂದೇ ಸಿನಿಮಾದಲ್ಲಿ ಎರಡು ಟೈಟಲ್ಗಳಿವೆ! ಎನ್ನುತ್ತಾರೆ ಚಿತ್ರದ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ. ಅದಕ್ಕೆ ಕಾರಣ ಈ ಚಿತ್ರದ ಕಥಾಹಂದರ. ಚಿತ್ರದ ಮೊದಲಾರ್ಧ ಬಾರ್ನಲ್ಲಿ ಶುರುವಾಗಿ, ಬಾರ್ ಸುತ್ತ ಸಾಗಿದರೆ, ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗಿ ಅಲ್ಲೇ ಮುಗಿಯುತ್ತದೆ. ಹಾಗಾಗಿ `ಚಿತ್ರದ ಮೊದಲಾರ್ಧ’ ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಆಗಿದ್ದರೆ, ದ್ವಿತೀಯಾರ್ಧ `ದೇವರ ತಾಣ’ ಅಂತಿದೆ. ಈ ಎರಡೂ ಹೆಸರುಗಳು ಕೂಡ ನಮ್ಮ ಸಿನಿಮಾದ ಟೈಟಲ್ಗಳು! ಆದರೆ ಸೆನ್ಸಾರ್ ನಿಯಮದಂತೆ, ಒಂದು ಸಿನಿಮಾಕ್ಕೆ ಒಂದೇ ಹೆಸರು ಇಡಬೇಕಾಗಿರುವುದರಿಂದ, `ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಹೆಸರಿನಲ್ಲಿ ಸಿನಿಮಾ ಥಿಯೇಟರಿಗೆ ತರುತ್ತಿದ್ದೇವೆ’ ಎನ್ನುವುದು ಚಿತ್ರದ ಟೈಟಲ್ ಬಗ್ಗೆ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ನೀಡುವ ವಿವರಣೆ.
ಇದೇ ಮೊದಲ ಬಾರಿಗೆ ನಾಯಕ ನಟ ಕೋಮಲ್, `ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಸಿನಿಮಾದಲ್ಲಿ ಒಂದು ಹಿಂದಿನ ಚಾರಿತ್ರಿಕತೆ ಮತ್ತೊಂದು ಇಂದಿನ ಆಧುನಿಕತೆ ಭಾಗವಾಗಿರುವ ಎರಡು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದರಲ್ಲಿ ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಸಿನಿಮಾ ನಿರ್ದೇಶಕನ ಪಾತ್ರದಲ್ಲಿ ಕೋಮಲ್ `ಡಬಲ್’ ರೋಲ್ ಪ್ಲೇ ಮಾಡುತ್ತಿದ್ದಾರೆ.
ಇನ್ನು ಮೇಘನಾ ರಾಜ್ `ದೇವರ ತಾಣ’ದಲ್ಲಿ ರಾಣಿಯಾಗಿ ಕಾಣಿಸಿಕೊಂಡರೆ, `ಸಂಗೀತ’ ಬಾರ್ ನಲ್ಲಿ ನಾಯಕಿಯಾಗಿ ಜೊತೆಯಾಗುತ್ತಾರೆ. ಉಳಿದಂತೆ ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡ್, ವಜ್ರಧೀರ್ ಜೈನ್, ಉತ್ಸವ್, ಕಾರ್ತಿಕ್ ರಾವ್, ರಾಘು ರಾಮನಕೊಪ್ಪ, ಸಿರಿಜಾ, ವರ್ಧನ್, ಕರಣ್, ರಾಧಿಕ ರಾವ್ ದಿವ್ಯಶ್ರೀ, ಅಕ್ಷತಾ, ಅರಸು, ಮಹೇಶ್, ನಾಗರಾಜ್ , ಚಿತ್ರಕಲಾ, ಉಮೇಶ್ ಕಿನ್ನಾಳ್, ಮನೀಶ್ ಶೆಟ್ಟಿ, ರಾಧಾಕೃಷ್ಣ, ಮಹಾಬಲೇಶ್ವರ ಭಟ್ ಹೀಗೆ ದೊಡ್ಡ ಕಲಾವಿದರ ಬೃಹತ್ ತಾರಾಗಣವೇ ಚಿತ್ರದಲ್ಲಿದೆ.
ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಚಿತ್ರೀಕರಣ ಪೂರ್ಣ



