ಕೋಲಾರ : ಕಿರು ಉದ್ದಿಮೆ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ಅವಶ್ಯಕತೆ ಇದೆ ಎಂದು ತಿಳಿಸುವುದರೊಂದಿಗೆ ಕೋಲಾರ ನಗರದ ಜನನಿಬಿಡ ಪ್ರದೇಶದಲ್ಲಿ ವಾರಕ್ಕೊಂದು ದಿನ ರೈತರ ಸಂತೆಯನ್ನು ನೆಡೆಸಬೇಕು,ಸುಮಾರು ೪೫ ಜನರು ಯೋಜನೆಯಡಿ ಫಲಾನುಭವಿಗಳಾಗಲು ಆಸಕ್ತಿ ತೋರಿಸಿದ್ದು, ೩೧ ಫಲಾನುಭವಿಗಳನ್ನು ನೊಂದಾಯಿಸಲಾಗಿರುತ್ತದೆ ಎಂದು ಲೋಕಸಭಾ ಸದಸ್ಯರಾದ ಎಂ.ಮಲ್ಲೇಶ್ ಬಾಬು ರವರು ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ, ಕೆಪೆಕ್ ಲಿಮಿಟೆಡ್ ಬೆಂಗಳೂರು ಇವರ ಸಹಯೋಗದೊಂದಿಗೆ ಪಿಎಂಎಫ್ಎAಇ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆ ವಿಸ್ತರಿಸಲು ಅವಕಾಶವಿದ್ದು. ಬ್ಯಾಂಕ್ ಸಾಲದೊಂದಿಗೆ ಶೇ.೫೦ ರಷ್ಟು ಅಥವಾ ಗರಿಷ್ಠ ೧೫ ಲಕ್ಷಗಳವರೆಗೆ ಸಹಾಯಧನ ಸಿಗಲಿದೆ. ಆತ್ಮನಿರ್ಭರ ಭಾರತ ಅಭಿಯಾನ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎAಇ) ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ನೀಡುವ ಸಹಾಯಧನ ಯೋಜನೆಯಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಭಾಗೇವಾಡಿ ಹೇಳಿದರು.
ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ತಿಳಿದು ಆಧುನಿಕ ತಂತ್ರಜ್ಞಾನ ಅಳವಡಿಕೆ ಮಾಡಿಕೊಂಡು ಕೃಷಿ ಮಾಡಿದಾಗ ನಷ್ಟ ಆಗುವುದಿಲ್ಲ. ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಹಾಗೂ ಕೃಷಿ ಮಾಡುವ ಸಂದರ್ಭದಲ್ಲಿ ಕೃಷಿ ವಿಶ್ವ ವಿದ್ಯಾಲಯದ ಹಾಗೂ ಕೃಷಿ ಇಲಾಖೆಯ ಮಾರ್ಗದರ್ಶನ ಪಡೆದುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದರು.
ಆತ್ಮ ನಿರ್ಭರ ಯೋಜನೆಯ ಲಾಭ ಎಲ್ಲ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು. ಬೇಕರಿ ಉದ್ದಿಮೆ, ಖಾರ ಪುಡಿ ತಯಾರಿಕೆ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಪ್ರೊಜೆಕ್ಟ್ ತಯಾರಿಸಿ ಕೃಷಿ ಇಲಾಖೆಗೆ ಸಲ್ಲಿಸಿದಾಗ ಸೂಕ್ತ ಮಾರ್ಗದರ್ಶನದಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಈ ಕಾರ್ಯಾಗಾರದ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಮಾತನಾಡಿ, ಪಿಎಂಎಫ್ಎAಇ ಒಂದು ಉಪಯುಕ್ತ ಯೋಜನೆಯಾಗಿದೆ. ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್ ಗಳು ಸಹಕರಿಸುತ್ತವೆ. ಬೇಡಿಕೆಗನುಸಾರವಾಗಿ ರೈತರು ಬೆಳೆ ಬೆಳೆದು ಮಾರುಕಟ್ಟೆಗೆ ಅವಕಾಶ ಕಲ್ಪಿಸಬೇಕಾಗಿದೆ ಎಂದರು.
ಪಿಎAಎಫ್ಎAಇ ಯೋಜನೆ ಫಲಾನುಭವಿಗಳಿಂದ ಉದ್ದಿಮೆಗಳ ಉತ್ಪನ್ನದ ಗಾಣದ ಎಣ್ಣೆ,ಅವಲಕ್ಕಿ, ಖಾರ ಪುಡಿ,ಚಟ್ನಿ ಪುಡಿ,ರಾಗಿ ಲಾಡು,ಪುಳಿಯೋಗರೆ ಗೊಜ್ಜು,ವಿವಿಧ ಬಗೆಯ ಅಣಬೆ, ಬೇಕರಿ ತಿಂಡಿಗಳು ವಿವಿಧ ಆಹಾರ ಉತ್ಪನ್ನಗಳ ಮಾರಾಟ ಮಳಿಗೆಗಳು ಜನರನ್ನು ಆಕರ್ಷಿಸಿದವು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷರಾದ ಲಕ್ಷ್ಮೀದೇವಮ್ಮ ರಮೇಶ್, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವಡಗೂರು ನಾಗರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಜೋಶಿ, ಕೆಪೆಕ್ ಸಂಸ್ಥೆಯ ……., ತೋಟಗಾರಿಕೆ ಇಲಾಖೆಯ ಕುಮಾರಸ್ವಾಮಿ, ಕೃಷಿ ವಿಜ್ಞಾನ ಕೇಂದ್ರದ ಶಿವಾನಂದ, ಸೇರಿದಂತೆ ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಅಧಿಕಾರಿಗಳು ಹಾಜರಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಪ್ರವಿಣ್.ಪಿ.ಬಾಗೇವಾಡಿ ರವರು ಜಿಲ್ಲೆಯ ರೈತರಿಗೆ ಆಹಾರ ಸಂಸ್ಕರಣೆ ಉದ್ದಿಮೆಗಳ ಅವಶ್ಯಕತೆಯಿದ್ದು, ಸದರಿ ಯೋಜನೆಯಡಿ ನವ ಉದ್ದಿಮೆದಾರರಿಗೆ ತರಬೇತಿ, ಬ್ರಾಡಿಂಗ್, ಮಾರುಕಟ್ಟೆ ವ್ಯವಸ್ಥೆ ಒದಗಿಸಲಾಗುತ್ತಿದೆ ಹಾಗೂ ಕೃಷಿ ಮತ್ತು ಮಹಿಳಾ ಸಬಲೀಕರಣಕ್ಕೆ ಸದಾವಕಾಶವನ್ನು ಕಲ್ಪಿಸುತ್ತಿದೆ ಎಂದು ಹೇಳಿದರು.