ಕೆಂಗೇರಿ: ಜನಪರ ಯೋಜನೆ ಜಾರಿ ಮಾಡುವುದು ಸೇರಿದಂತೆ ಶಾಸಕನಾಗಿ ನನ್ನನ್ನು ಆಯ್ಕೆ ಮಾಡಿದ ಮತದಾರರಿಗೆ ನಾಗರೀಕ ಮೂಲಭೂತ ಸೌಲಭ್ಯ ಕಲ್ಪಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವುದೆ ನನ್ನ ಧ್ಯೇಯ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಗೇರಿ ವಾರ್ಡ್ ವ್ಯಾಪ್ತಿಯ ಪಟ್ಟಣಗೆರೆ ಗ್ರಾಮದ ಎಲ್ಲ ರಸ್ತೆಗಳಿಗೆ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದ್ದು ಹಾಗು ಮೈಸೂರು ಮುಖ್ಯರಸ್ತೆಯಿಂದ ಪಟ್ಟಣಗೆರೆ ಸರ್ಕಲ್ ಮಾರಮ್ಮ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆ ರಸ್ತೆ ಉದ್ಘಾಟಿಸಲು ಅತೀಶೀಘ್ರದಲ್ಲಿ ದಿನಾಂಕವನ್ನು ನಿಗದಿ ಪಡಿಸಲಾಗುವುದು ಹಾಗೆಯೇ, ಸ್ಥಳೀಯರ ನಾಗರೀಕರ ಅಭಿಪ್ರಾಯ ಪಡೆದು ಸಮಸ್ಯೆಗಳಿದ್ದಲ್ಲಿ ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರ ಜೊತೆ ಚರ್ಚಿಸಿ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ, ಕ್ಷೇತ್ರದೆಲ್ಲೆಡೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ, ಸ್ಥಳೀಯರು ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು ಯುವ ಮುಖಂಡ ಕೆ ಕಿರಣ್ ಕುಮಾರ್ ಹಾಗು ಊರಿನ ಮುಖಂಡರು ಉಪಸ್ಥಿತರಿದ್ದರು.