ಹಾಸನ: ತಾಯಿ ಹಾಗೂ ಮಕ್ಕಳಿಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರ ವಲಯದಲ್ಲಿ ನಡೆದಿದೆ.
ಹಾಸನ ಹೊರವಲಯದ ದಾಸರಕೊಪ್ಪಲಿನಲ್ಲಿ ತಾಯಿ ಶಿವಮ್ಮ ಮಕ್ಕಳಾದ ಪವನ್, ಸಿಂಚು ಎಂಬುವರು ಮೃತಪಟ್ಟಿದ್ದಾರೆ.
ಅವರು ನಿಗೂಢವಾಗಿ ಸಾವನ್ನಪ್ಪಿರುವುದು ಅನುಮಾನಕ್ಕೆಡೆಮಾಡಿಕೊಟ್ಟಿರುವುದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಆನ್ ಮಾಡಿ ತಾಯಿ ಮಕ್ಕಳು ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಿಗ್ಗೆ ಮೃತ ಶಿವಮ್ಮಳ ಪತಿ ಎಷ್ಟು ಬಾರಿ ಫೋನ್ ಮಾಡಿದರೂ ಫೋನ್ ತೆಗೆದು ಮಾತನಾಡಿಲ್ಲ.
ಇದರಿಂದ ಮನೆ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಘಟನೆ ಸಂಬಂಧ ಫೆನಷನ್ ಮೊಹಲ್ ಠಾಣೆಯಲ್ಲಿಯಲ್ಲಿ ಪ್ರಕರಣ ದಾಖಲಾಗಿದೆ.