`ಜಿ9′ ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ ನಿರ್ದೇಶನದ `ಡಿಯರ್ ಹಸ್ಬೆಂಡ್’ ಚಿತ್ರದ ತೆರೆ ಹಿಂದಿನ ಕೆಲಸಗಳು ಭರದಿಂದ ನಡೆಯುತ್ತಿದೆ.
ಈಗಾಗಲೇ ಸದ್ದಿಲ್ಲದೆ, `ಡಿಯರ್ ಹಸ್ಬೆಂಡ್’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯವನ್ನೂ ಕೂಡ ಮಾಡಿ ಮುಗಿಸಿದೆ.
ಇನ್ನು `ಡಿಯರ್ ಹಸ್ಬೆಂಡ್’ ಚಿತ್ರದ ಕೊನೆಯ ಹಾಡಿಗೆ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡಿನ ಧ್ವನಿಮುದ್ರಣ ಕಾರ್ಯ ನಡೆಯಿತು. ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ `ಮಾಲಾಶ್ರೀ ಸಿಕ್ಕಳೋ’ ಮೆಲ್ಲನೆ ನಕ್ಕಳೋ ಎಂದು ಆರಂಭವಾಗುವ ಟಪೋರಿ ಶೈಲಿಯ ಈ ಹಾಡಿನ ಸಾಲುಗಳಿಗೆ ಪ್ರಮೋದ ಮರವಂತೆ ಸಾಹಿತ್ಯವಿದ್ದು, ಮುಂಬೈನಿAದ ಬೆಂಗಳೂರಿಗೆ ಬಂದ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಈ ಹಾಡಿಗೆ ಧ್ವನಿಯಾಗಿ ಮೆರಗು ತಂದಿದ್ದಾರೆ
ಇನ್ನು ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ `ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ ನಟರಾದ ಸೂರಜ್ ಗೌಡ, ಶರಣ್ಯಾ ಶೆಟ್ಟಿ, ಪ್ರವೀಣ್, ಕುಮಾರ ಬಂಗಾರಪ್ಪ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ ಮರವಂತೆ ಸಾಹಿತ್ಯ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.
ಚಿತ್ರದ ಮುಂದಿನ ಹಂತದ ಚಿತ್ರೀಕರಣವನ್ನು ಬೆಂಗಳೂರು, ಮಂಡ್ಯ, ಮೈಸೂರು, ಶ್ರೀರಂಗಪಟ್ಟಣ, ಗೋವಾ ಮತ್ತಿತರ ಕಡೆಗಳಲ್ಲಿ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ.`ಜಿ9′ ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ ನಿರ್ದೇಶನದ `ಡಿಯರ್ ಹಸ್ಬೆಂಡ್’ ಚಿತ್ರದ ತೆರೆ ಹಿಂದಿನ ಕೆಲಸಗಳು ಭರದಿಂದ ನಡೆಯುತ್ತಿದೆ.
ಈಗಾಗಲೇ ಸದ್ದಿಲ್ಲದೆ, `ಡಿಯರ್ ಹಸ್ಬೆಂಡ್’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯವನ್ನೂ ಕೂಡ ಮಾಡಿ ಮುಗಿಸಿದೆ.
ಇನ್ನು `ಡಿಯರ್ ಹಸ್ಬೆಂಡ್’ ಚಿತ್ರದ ಕೊನೆಯ ಹಾಡಿಗೆ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡಿನ ಧ್ವನಿಮುದ್ರಣ ಕಾರ್ಯ ನಡೆಯಿತು. ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ `ಮಾಲಾಶ್ರೀ ಸಿಕ್ಕಳೋ’ ಮೆಲ್ಲನೆ ನಕ್ಕಳೋ ಎಂದು ಆರಂಭವಾಗುವ ಟಪೋರಿ ಶೈಲಿಯ ಈ ಹಾಡಿನ ಸಾಲುಗಳಿಗೆ ಪ್ರಮೋದ ಮರವಂತೆ ಸಾಹಿತ್ಯವಿದ್ದು, ಮುಂಬೈನಿAದ ಬೆಂಗಳೂರಿಗೆ ಬಂದ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಈ ಹಾಡಿಗೆ ಧ್ವನಿಯಾಗಿ ಮೆರಗು ತಂದಿದ್ದಾರೆ
ಇನ್ನು ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ `ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ ನಟರಾದ ಸೂರಜ್ ಗೌಡ, ಶರಣ್ಯಾ ಶೆಟ್ಟಿ, ಪ್ರವೀಣ್, ಕುಮಾರ ಬಂಗಾರಪ್ಪ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ ಮರವಂತೆ ಸಾಹಿತ್ಯ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.
ಚಿತ್ರದ ಮುಂದಿನ ಹಂತದ ಚಿತ್ರೀಕರಣವನ್ನು ಬೆಂಗಳೂರು, ಮಂಡ್ಯ, ಮೈಸೂರು, ಶ್ರೀರಂಗಪಟ್ಟಣ, ಗೋವಾ ಮತ್ತಿತರ ಕಡೆಗಳಲ್ಲಿ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ.
`ಡಿಯರ್ ಹಸ್ಬೆಂಡ್’ಗೆ ನಕಾಶ್ ದನಿ