ಬೆಂಗಳೂರು: ಈ ತಿಂಗಳ 24ರಂದು ರಾಜ್ಯಕ್ಕೆ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಅವರು ಭೇಟಿ ನೀಡಲಿದ್ದಾರೆ. ಅಂದು ಅವರು ಪಕ್ಷದ ಶಾಸಕರು, ಸಂಸದರು, ರಾಜ್ಯಮತ್ತು ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಂತರ ನಬಿನ್ ಅವರು ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳುವರು ಸಂಜೆ ಬೆಂಗಳೂರು ಉತ್ತರ ಜಿಲ್ಲಾ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು ಎರಡು ದಿನಗಳ ಕಾಲ ನಬಿನ್ ಅವರು ರಾಜ್ಯದಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಭೇಟಿ ಸಂದರ್ಭದಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಪ್ರಮುಖರಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಈ ತಿಂಗಳ 24ರಂದು ರಾಜ್ಯಕ್ಕೆ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ



