ಬೆಂಗಳೂರು/ಬಾಗಲಕೋಟೆ: ಒಂದು ಟನ್ ಕಬ್ಬಿಗೆ ೩೫೦೦ ರೂಪಾಯಿ ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆಯ ಗದ್ದನಕೇರಿ ಕ್ರಾಸ್ನಲ್ಲಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟಿçÃಯ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಸುಮಾರು ೯ ದಿನಗಳಿಂದ ಕಬ್ಬು ಬೆಲೆಯ ಕುರಿತು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಪ್ರತಿಭಟನಾನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಮಾಲೀಕರೊಂದಿಗೆ ರೈತರ ಸಂಧಾನ ಏರ್ಪಡಿಸಿ ಸಮಸ್ಯೆ ಬಗೆಹರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
ಇಂದು ರಾಷ್ಟಿçÃಯ ಹೆದ್ದಾರಿ ೨೧೮ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟಿçÃಯ ಹೆದ್ದಾರಿ ಮೇಲೆ ಕೂತು ರೈತರ ಪ್ರತಿಭಟನೆ ಮಾಡುತ್ತಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಟ್ರಾö್ಯಕ್ಟರ್ ಸೇರಿ ಹಲವು ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗದ್ದನಕೇರೆ ಕ್ರಾಸನ್ಲ್ಲಿ ಪೊಲೀಸರು ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದ್ದು, ಸ್ಥಳದಲ್ಲಿ ೪ ಡಿಎಆರ್ ವಾಹನ ಇರಿಸಿದ್ದು, ರೈತರ ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಬ್ಬು ಬೆಳೆಗಾರರ ಪ್ರತಿಭಟನೆಗೆ ಬೆಂಬಲಿಸಿ ಕರವೇ ಶಿವರಾಮೇಗೌಡ ಬಣದಿಂದ ರಾಜಾಜಿನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಫಿಲ್ಮ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಪಾಲ್ಗೊಂಡಿದ್ದಾರೆ.



