ಬೆಂಗಳೂರು: ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಅವರನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.
ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಜೀರ್ ಅಹ್ಮದ್ ಅವರಿಗೆ ಸೂಚಿಸಲಾಗಿತ್ತು ಎಂದು ಹೇಳಲಾಗಿದೆ. ಅದರಂತೆ ಅವರು ನಿನ್ನೆ ಸಂಜೆಯೊಳಗಾಗಿ ತಮ್ಮ ರಾಜೀನಾಮೆಯನ್ನು ನೀಡಿದ್ದರು.
ನಿನ್ನೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್ಗೆ ಡೆಡ್ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು. ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ
ನಜೀರ್ ಅಹ್ಮದ್ಗೆ ಕೊಕ್ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ



