ನವದೆಹಲಿ: 18ನೇ ಲೋಕಸಭೆ ಅಸ್ಥಿತ್ವಕ್ಕೆ ಬರುವ ಸಂಬಂಧ ದೆಹಲಿಯಲ್ಲಿಂದು ಎನ್ಡಿಎ ಮೈತ್ರಿಕೂಟದ ಮಹತ್ವದ ಸಭೆ ನಡೆಯುತ್ತಿದೆ.ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಭೆಯಲ್ಲಿ ಪಾಲ್ಗೊಂಡಿರುವ ಎಲ್ಲಾ ನಾಯಕರಿಗೂ ಸ್ವಾಗತಕೋರುತ್ತಾ ತಮ್ಮೊಂದಿಗೆ ಮೈತ್ರಿ ಮಾಡಿಕೊಂಡು ಗೆಲುವು ಸಾಧಿಸಿರುವ ಪಕ್ಷಗಳ ಮುಖಂಡರು ಹಾಗೂ ಸಂಸದರ ಪರಿಚಯವನ್ನು ಮಾಡಿಕೊಟ್ಟಿದ್ದಾರೆ.ಇಂದು ನಡೆಯುತ್ತಿರುವ ಸಭೆಯಲ್ಲಿ ಹಂಗಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎನ್ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.