ಚಿಕ್ಕಬಳ್ಳಾಪುರ: ರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಇದು ಜನ ವಿರೋಧಿ ಸರ್ಕಾರ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದರು.
ಅವರು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಚುನಾವಣಾಪೂರ್ವ ಸಮೀಕ್ಷೆಗಳು ಸಹ ಎನ್.ಡಿ.ಎ ಸರ್ಕಾರಕ್ಕೆ ಈ ಬಾರಿ ಅಧಿಕಾರಕ್ಕೆ ಬರುವ ಅವಕಾಶವಿಲ್ಲ ಎಂದು ಹೇಳಿದೆ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಕ್ಷಾ ರಾಮಯ್ಯ ರವರನ್ನು ಈ ಕ್ಷೇತ್ರದ ಜನತೆ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಕೊರೋನಾ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ ಅವ್ಯವಹಾರ ನಡೆಸಿದ್ದು ಇವರ ಅವ್ಯವಹಾರಗಳ ತನಿಖೆಗೆ ಸಮಿತಿಯೊಂದನ್ನು ರಚಿಸಲಾಗಿದೆ ಈ ಸಮಿತಿ ತನ್ನ ವರದಿಯನ್ನು ಕೊಟ್ಟ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಆಗ ಇವರು ಜೈಲು ಸೇರುತ್ತಾರೆ ಎಂದರು.ಕೇಂದ್ರ ಸರ್ಕಾರ ಬಹು ಮುಖ್ಯವಾದ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಲಿಲ್ಲ ಆದರೆ ಸ್ವಾಮಿನಾಥನಿಗೆ ಭಾರತರತ್ನ ಪ್ರಶಸ್ತಿ ನೀಡಿದರು ಇದು ಯಾವ ನ್ಯಾಯ ಎಂದು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಉರಿ ಬಿಸಿಲಿನಲ್ಲಿ ಸಹ ಹತ್ತು ಸಾವಿರಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಇಲ್ಲಿ ಸೇರಿರುವುದನ್ನು ಗಮನಿಸಿದರೆ ಈ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನೀವೆಲ್ಲರೂ ಸೇರಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸುತ್ತಿರುವ ನಂಬಿಕೆ ನನಗಿದೆ ಎಂದರು.ರೋಡ್ ಶೋ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಶಾಸಕ ಪ್ರದೀಪ್ ಈಶ್ವರ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಒಳಗೊಂಡಂತೆ ಅನೇಕ ಮಂದಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಕಾನೂನು ಮತ್ತು ಸ್ವಯಾವಸ್ಥೆಗೆ ಧಕ್ಕೆ ತರದಂತೆ ವಿಜಯದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.