ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ನಾಳೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ.



