LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ

ದಾವಣಗೆರೆ: ಜುಲೈ 22 ರಂದು ದಾವಣಗೆರೆ ನಗರದ ಆಜಾದ್ ನಗರದಲ್ಲಿನ ಮುದ್ದಾಬೋವಿ ಕಾಲೋನಿಯಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ.ಕರೆಣ್ಣವರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ಕಂಡು ತಮ್ಮ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ನ್ಯಾಯಾಲಯದ ಸಿಬ್ಬಂದಿಯವರು ಹಾಗೂ ಅಂಗನವಾಡಿ ಮೇಲ್ವಿಚಾರಕರೊಂದಿಗೆ ಕೇಂದ್ರಕ್ಕೆ ಭೇಟಿ ನೀಡಲಾಯಿತು. ಅಂಗನವಾಡಿ ಕೇಂದ್ರಗಳ ಕಟ್ಟಡದಲ್ಲಿ ಸರಿಯಾದ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರಲಿಲ್ಲ, ಇಲ್ಲಿ ಶೌಚಾಲಯ ಕೂಡ ಇಲ್ಲ. ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿಗೆ ಬರುಅವ ಮಕ್ಕಳ ದೈನಂದಿನ ಹಾಜರಿಯನ್ನು ಭರ್ತಿ ಮಾಡಿರುವುದಿಲ್ಲ.

ವೆಂಕ ಭೋವಿ ಕಾಲೋನಿಯಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಕಳೆದ ಒಂದು ವಾರದಿಂದ ಹಾಜರತಿ ಪುಸ್ತಕದಲ್ಲಿ ನಮೂದು ಮಾಡಿಲ್ಲ. ಇಲಾಖೆಯಿಂದ ಮಕ್ಕಳಿಗೆ ಆಟಿಕೆ ಸಾಮಾನುಗಳನ್ನು ಪೂರೈಸಿದ್ದರೂ ಕೂಡ ಅವುಗಳನ್ನು ಗಂಟು ಮೂಟೆ ಕಟ್ಟಿ ಮಕ್ಕಳ ಕೈಗೆ ಸಿಗದ ಹಾಗೆ ಇರಿಸಲಾಗಿತ್ತು. ಊಟವನ್ನು ಪರಿಶೀಲಿಸಿ ನೋಡಿದಾಗ ಇಲಾಖೆಯ ನಿರ್ದೇಶನದಂತೆ ಊಟವನ್ನು ತಯಾರಿಸಿರಲಿಲ್ಲ. ಮಾಡಲಾಗಿದ್ದ ಅನ್ನ ಮತ್ತು ಉಪ್ಪಿಟ್ಟಿನಲ್ಲಿ ಪೋಷಕಾಂಶಗಳು ಕೊರತೆ ಕಂಡು ಬಂದಿತು.

ಅವ್ಯವಸ್ಥೆಯನ್ನು ಕಂಡ ನ್ಯಾಯಾಧೀಶರು ಅಂಗನವಾಡಿ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕರಿಗೆ ಮತ್ತು ಅಂಗನವಾಡಿ ಮೇಲ್ವಿಚಾರಕರಿಗೆ ಸರ್ಕಾರದ ಆಶಯ ಮತ್ತು ಉದ್ದೇಶಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಇಲ್ಲಿನ ಕೊರತೆಗಳ ಬಗ್ಗೆ ಇಲಾಖೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು