LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ "ಮೈ ಹೀರೋ"ಗೆ ಪ್ರಶಂಸೆ ಹಾಗೂ ಪ್ರಶಸ್ತಿಯ ಸುರಿಮಳೆ

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ "ಮೈ ಹೀರೊ" ಚಿತ್ರ ಕಳೆದ ಆಗಸ್ಟ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.

ಅಷ್ಟೇ ಅಲ್ಲದೇ ಪ್ರಪಂಚದ ಪ್ರಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ "ಮೈ ಹೀರೋ" ಚಿತ್ರ ಪ್ರದರ್ಶನವಾಗಿದೆ. ಚಿತ್ರಕ್ಕೆ ಈವರೆಗೂ ಪ್ರದರ್ಶನವಾಗಿರುವ ಎಲ್ಲಾ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರಶಂಸೆಯ ಜೊತೆಗೆ ಪ್ರಶಸ್ತಿ ಕೂಡ ದೊರಕಿರುವುದು ಚಿತ್ರತಂಡದವರಲ್ಲಿ ಸಂತಸ ಮನ ಮಾಡಿದೆ.

"ಟೋಕಿಯೋ ಇಂಟರ್ನ್ಯಾಷನಲ್ ಸಿನಿಮಾ ಅವಾರ್ಡ್ಸ್ 2024", "ಸ್ಯಾನ್ ಡಿಯ್ಗೊ ಇಂಡಿಪೆಂಡೆಂಟ್ ಸಿನಿಮಾ ಅವಾರ್ಡ್ಸ್"(ಇಂಡಿಯನ್ ಸಿನಿಮಾ), " ""MIAFF" 2024 (ಬೆಸ್ಟ್ ನರೇಟಿವ್ ಫ್ಯೂಚರ್ ಫಿಲ್ಮ್ ಹಾಗೂ ಬೆಸ್ಟ್ ಡೈರೆಕ್ಟರ್), "ನ್ಯೂಯಾರ್ಕ್ ಫಿಲಂ & ಸಿನಿ ಮೆಟೊಗ್ರಾಫಿ ಅವಾರ್ಡ್ 2024", "ಸ್ವಿಡನ್ ಫಿಲಂ ಅವಾರ್ಡ್ಸ್" ನಲ್ಲಿ ಬೆಸ್ಟ್ ಫ್ಯೂಚರ್ ಫಿಲಂ, "ಬ್ಯಾಂಗ್ ಕಾಕ್ ಮೂವೀ ಅವಾರ್ಡ್ಸ್‍ನಲ್ಲಿ" ನಿರ್ದೇಶಕರಿಗೆ ಬೆಸ್ಟ್ ಮೂವೀ ಮೇಕರ್ ಹಾಗೂ "ವೆಸ್ಟರ್ನ್ ಕೆನಡಿಯನ್ ಇಂಟರ್ನ್ಯಾಷನಲ್ ಅವಾರ್ಡ್ಸ್" ನಲ್ಲಿ ಉತ್ತಮ ಚಿತ್ರ ಹಾಗೂ ಉತ್ತಮ ನಿರ್ದೇಶಕ ಪ್ರಶಸ್ತಿ ದೊರಕಿದೆ.

ಈ ಮೇಲ್ಕಂಡ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮಾತ್ರವಲ್ಲದೇ ಮುಂದೆ ಕೂಡ ಪ್ರಪಂಚದ ಹೆಸರಾಂತ ಚಲನಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಲಿದೆ. ನಮ್ಮ ಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ & ನಿರ್ದೇಶಕ ಅವಿನಾಶ್ ವಿಜಯಕುಮಾರ್. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ದತ್ತಣ್ಣ, ಪ್ರಕಾಶ್ ಬೆಳವಾಡಿ, ಎರಿಕ್ ರಾಬರ್ಟ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ "ಮೈ ಹೀರೊ" ಚತ್ರಕ್ಕಿದ್ದು, ಅವಿನಾಶ್ ವಿಜಯಕುಮಾರ್ ಅವರೆ ಸಂಭಾಷಣೆ ಬರೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು