LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಂಬೇಡ್ಕರ್ ಮೂಲ ಉದ್ದೇಶ ಈಡೇರಲು ನಾವೆಲ್ಲರೂ ಶ್ರಮಿಸಬೇಕು: ಎಬಿಬಿ ಮಂಜಣ್ಣ

ಪೀಣ್ಯ,ದಾಸರಹಳ್ಳಿ: 'ನಮ್ಮ ಸಂವಿಧಾನವು ಜಾರಿಗೆ ಬಂದ ದಿನವನ್ನು ಆಚರಣೆ ಮಾಡುವುದೇ ಒಂದು ಹೆಮ್ಮೆಯ ವಿಷಯವಾಗಿದೆ. ಹಲವಾರು ಜಾತಿ ಧರ್ಮ ಆಚರಣೆಯುಳ್ಳ ದೇಶವಾದ ಭಾರತವು ಶಾಂತಿ ಸೌಹಾರ್ದತೆಯಿಂದ ಬಾಳಲು ಡಾ. ಬಿ.ಆರ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವು ಅವಕಾಶ ಮಾಡಿ ಕೊಟ್ಟಿದೆ', ಎಂದು ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಕಮಿಟಿ ಉಪಾಧ್ಯಕ್ಷರು ಹಾಗೂ ಶ್ರೀನಿವಾಸ ಮಂಜುನಾಥ ಫೌಂಡೇಶನ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಎಸ್ ಮಂಜುನಾಥ್ (ಎಬಿಬಿ ಮಂಜಣ್ಣ) ಹೇಳಿದರು.

ಬಾಗಲಗುಂಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಕವಾಯತು ಪೆರೇಡ್ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಳ್ಳುವ ಮೂಲಕ ನಾವೆಲ್ಲರೂ ಅವರು ಮಾಡಿರುವ ತ್ಯಾಗವನ್ನು ಗೌರವಿಸಬೇಕು', ಎಂದು ಹೇಳಿದರು.

ಇದೇ ವೇಳೆ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು. ಅತಿಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ನಂತರ ನಡೆದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ವೇಣುಗೋಪಾಲ್, ಸಮಾಜ ಸೇವಕರಾದ ಮಹದೇವಯ್ಯ, ಯುವ ಮುಖಂಡರಾದ ಕೇಶವ ದಾಸ್ ಸೇರಿದಂತೆ ಹಲವಾರು ಮುಖಂಡರು, ಎಸ್.ಡಿ.ಎಂ.ಸಿ ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು