LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಂಬೇಡ್ಕರ್ ರನ್ನು ಅವಮಾನಿಸಿದ ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಆಗ್ರಹ

ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ.

ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ನೀಡಬೇಕು ಮತ್ತು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ನೀರಜ್ ಡಾಂಗಿ, ತಮ್ಮ ಹೇಳಿಕೆಗೆ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದರು.

"ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವುದು ಒಂದು ಫ್ಯಾಶನ್ ಆಗಿದೆ ಎಂದು ಟೀಕಿಸಿದ್ದಾರೆ. ಇದು ದೇಶದ ದಲಿತರು ಮತ್ತು ಬಾಬಾಸಾಹೇಬರಿಗೆ ಮಾಡಿದ ಅವಮಾನವಾಗಿದೆ" ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಅಮಿತ್ ಶಾ ಇಡೀ ದೇಶಕ್ಕೆ ತೋರಿಸಿದ್ದಾರೆ ಎಂದರು.

ಬಿಜೆಪಿ ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದು, ಇದೇ ವರ್ಗದವರು ಅವರನ್ನು 240ರಿಂದ 40ಕ್ಕೆ ಇಳಿಸಲಿದ್ದಾರೆ ಎಂದು ಡಾಂಗಿ ಹೇಳಿದರು.

"ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಅವರು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ ಅವರು ಸಾಂವಿಧಾನಿಕ ಹುದ್ದೆ ಅಲಂಕರಿಸುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ" ಎಂದು ಡಾಂಗಿ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು