ಮಂಡ್ಯ: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರ ಮನೆ ಹಾಗೂ ಫಾರ್ಮ್ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿ, ಸೋಮನಹಳ್ಳಿ ಮತ್ತು ಬೆಸಗರಹಳ್ಳಿಯ ಹಾಸ್ಟೆಲ್‌ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿವರಾಜು ಕಳೆದ ತಿಂಗಳಷ್ಟೇ ಸೇವೆಯಿಂದ ನಿವೃತ್ತರಾಗಿದ್ದರು. ಮದ್ದೂರಿನ ಕೊಲ್ಲಿ ವೃತ್ತದ ಬಳಿ ಇರುವ ವಿನಾಯಕ ಬಡಾವಣೆಯಲ್ಲಿರುವ ಅವರ ಮನೆ ಹಾಗೂ ಫಾರ್ಮ್ಹೌಸ್ ಮೇಲೆ ಅಧಿಕಾರಿಗಳು ಬಲೆ ಬೀಸಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ.ಈ ಭರ್ಜರಿ ಕಾರ್ಯಾಚರಣೆಯ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಅಪಾರ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ, ಶಿವರಾಜು ತಮ್ಮ ಫಾರ್ಮ್ಹೌಸ್‌ನಲ್ಲಿ ಮಿನಿ ಬಾರ್ ಮಾದರಿಯಲ್ಲೇ ದುಬಾರಿ ಬೆಲೆಯ