LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಕ್ರಮವಾಗಿ ಮದ್ಯ ಮಾರಾಟ, ಆರೋಪಿ ವಶ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಬಳಿಯ ಉದ್ಯಮಿ ಚಂದ್ರಪ್ಪ ಎಂಬುವರಿಗೆ ಸೇರಿದ ವಿನಾಯಕ ಎಮ್​ಆರ್​ಪಿ ಬಾರ್​ ಅನ್ನು ನಿಯಮ ಮೀರಿ ಬೆಳ್ಳಂ ಬೆಳಗ್ಗೆ ತೆರೆಯಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬಾರ್​ ಇದೆ. ದಿನನಿತ್ಯ ನಿಯಮ ಮೀರಿ ಬೆಳಗ್ಗೆ ಬಾರ್​ ತೆರದು, ಮದ್ಯ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೇ ಎಮ್​ಆರ್​​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಟಿವಿ9 ವರದಿ ಮಾಡುತ್ತಿದ್ದಂತೆ ಎಚ್ಚೆತ್ತ ಮಾದನಾಯಕನಹಳ್ಳಿ ಪೊಲೀಸರು ದಾಳಿ ಮಾಡಿದರು. ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಸಿಬ್ಬಂದಿ ಅನಿಲ್​ನನ್ನು ವಶಕ್ಕೆ ಪಡೆದಿದ್ದಾರೆ. ಸಾವಿರಾರು ರೂಪಾಯಿ ಬೆಲೆಬಾಳುವ ಮದ್ಯದ ಬಾಕ್ಸ್​ ಜಪ್ತಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST