LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು.

ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಅವರು, "60/40 ಅಳತೆಯ ನಿವೇಶನದಲ್ಲಿ ಇಷ್ಟು ದೊಡ್ಡ ಕಟ್ಟಡ ಕಟ್ಟಿರುವುದು ದೊಡ್ಡ ಅಪರಾಧ. ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ನೋಟೀಸ್ ನೀಡಿದರೆ ಸಾಲದು ಅದರ ಬದಲು ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಇದು ನಮಗೆ ದೊಡ್ಡ ಪಾಠವಾಗಿದೆ. ರಕ್ಷಣಾ ಕಾರ್ಯ ಮುಗಿದ ನಂತರ ಮುಂದಿನ ಎರಡು ದಿನಗಳಲ್ಲಿ ಇದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.

"ನಗರದಾದ್ಯಂತ ಅಕ್ರಮ ಕಟ್ಟಡಗಳ ಬಗ್ಗೆ ಸರ್ವೆ ಕಾರ್ಯ ಮಾಡಲಾಗುವುದು. ಕಟ್ಟಡ ವಿನ್ಯಾಸ ಹೊಂದಿರದವರಿಗೆ ಯಾವುದೇ ಕಾರಣಕ್ಕೂ ನೋಂದಣಿ ಮಾಡಿಕೊಡಬಾರದು ಎಂದು ಕಂದಾಯ ಇಲಾಖೆಗೆ ಸೂಚನೆ ನೀಡಲಾಗುವುದು. ಕಡಿಮೆ ದುಡ್ಡಿಗೆ ನಿವೇಶನ ತೆಗೆದುಕೊಂಡು ಮಾರಾಟ ಮಾಡಲು ಈ ರೀತಿ ಮಾಡಲಾಗುತ್ತದೆ. ಇಂತಹ ಅಕ್ರಮಗಳನ್ನು ತಡೆಗಟ್ಟುವ ಕಾರಣಕ್ಕಾಗಿ ರೇರಾ ಕಾಯ್ದೆ ಜಾರಿಯಲ್ಲಿದೆ" ಎಂದರು.

"21 ಕಾರ್ಮಿಕರರು ಕಟ್ಟಡದ ಅವಶೇಷಗಳ ಮಧ್ಯೆ ಸಿಲುಕಿದ್ದಾರೆ. ಇಬ್ಬರು ಕಾರ್ಮಿಕರು ಮೃತ ಪಟ್ಟಿದ್ದಾರೆ. 14 ಜನರ ರಕ್ಷಣೆ ಮಾಡಲಾಗಿದ್ದು, ಏಳು ಮಂದಿ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್ ಡಿಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡದವರು ಅತ್ಯಂತ ಜಾಗರೂಕವಾಗಿ ತರಾತುರಿಯಲ್ಲಿ ರಕ್ಷಣಾ ಕೆಲಸ ಮಾಡುತ್ತಿದ್ದಾರೆ. ಆಂಧ್ರ ಮತ್ತು ಬಿಹಾರ್ ರಾಜ್ಯದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಮೃತಪಟ್ಟಿರುವ ಒಬ್ಬ ಕಾರ್ಮಿಕರ ಗುರುತು ಸಿಕ್ಕಿದ್ದು, ಆತ ಬಿಹಾರದವರು ಎಂದು ತಿಳಿದುಬಂದಿದೆ" ಎಂದರು.

"ಕಟ್ಟಡ ನಿರ್ಮಾಣ ಗುತ್ತಿಗೆದಾರ, ನಿವೇಶನದ ಮಾಲೀಕ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ರಕ್ಷಣೆ ಕಾರ್ಯ ಮುಗಿದ ನಂತರ ಕಾರ್ಮಿಕರಿಗೆ ಪರಿಹಾರವನ್ನು ಕೊಡಲಾಗುವುದು" ಎಂದರು.ಬಾಗಿಲು ಒಡೆದು ರಕ್ಷಣೆ ಮಾಡಲು ಸೂಚನೆ: "ನಿರೀಕ್ಷೆಗೂ ಮೀರಿ ಹೆಚ್ಚಿನ ಮಳೆ ಸುರಿದಿದೆ. ಕೇಂದ್ರೀಯ ವಿರಹ ಬಡಾವಣೆಯಲ್ಲಿ ಏಳೆಂಟು ಕುಟುಂಬಗಳು ಕೆಳಗೆ ಬರದೆ ಬಾಗಿಲು ಮುಚ್ಚಿಕೊಂಡು ರಕ್ಷಣಾ ಕಾರ್ಯಕ್ಕೆ ಸಹಕರಿಸುತ್ತಿಲ್ಲ. ಏನಾದರೂ ಅವಘಡ ಆಗುವ ಮುಂಚಿತವಾಗಿ ಬಾಗಿಲನ್ನು ಹೊಡೆದು ಅವರ ರಕ್ಷಿಸಿ ಎಂದು ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು