LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಕ್ರಮ ಗಳಿಕೆ ಪರಿಶೀಲನೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಂಗಳೂರು: 18ನೇ ಲೋಕಸಭಾ ಚುನಾವಣಾ ಸಂಬಂಧವಾಗಿ ಸ್ಥಗಿತಗೊಂಡಿದ್ದ ಲೋಕಾಯುಕ್ತ ದಾಳಿಯನ್ನು ಸರ್ಕಾರಿ ನೌಕರರ ಅಧಿಕಾರಿ ಮತ್ತು ಸಿಬ್ಬಂದಿಗಳ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ರಾಜ್ಯದ ಸುಮಾರು 9 ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

ಕಲ್ಬುರ್ಗಿ, ಬೆಳಗಾಂ, ಧಾರವಾಡ, ಮಂಡ್ಯ, ಮೈಸೂರ್, ಹಾಸನ, ಕೋಲಾರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಎಸ್ಪಿ ಮಟ್ಟದ ಅಧಿಕಾರಿ ಸೇರಿದಂತೆ ನೂರಾರು ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಸುಮಾರು 11ಪ್ರಕರಣಗಳಲ್ಲಿ 56 ಜಾಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ದಾವಣಗೆರೆ ಎರಡು ಚಿತ್ರದುರ್ಗ 2 ಮತ್ತು ಉಳಿದಂತ ಏಳು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣದ ತನಿಖೆ ಮತ್ತು ತಪ್ಪಾಸಣೆ ನಡೆಸಿ ಚಿನ್ನ, ಬೆಳ್ಳಿ ಆಭರಣಗಳು, ಜಮೀನಿನ ಕಾಗದಪತ್ರಗಳು, ನಗದು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿರುತ್ತಾರೆ.ಕಲ್ಬುರ್ಗಿಯ ಬಸವರಾಜ್ ಮಾಗಿ ಬಿಬಿಎಂಪಿ, ಮಂಡ್ಯ ಜಿಲ್ಲೆಯ ಶಿವರಾಜ್ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್, ಚಿತ್ರದುರ್ಗ ಜಿಲ್ಲೆಯ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ರವೀಂದ್ರ, ಧಾರವಾಡ ಜಿಲ್ಲೆಯ ಶೇಖರ ಗೌಡ ಪ್ರಾಜೆಕ್ಟ್ ಡೈರೆಕ್ಟರ್,ʼ

ಬೆಳಗಾಂ ಜಿಲ್ಲೆಯ ಮಹದೇವ್ ಬನ್ನೂರ್ ಅಸ್ಸಿಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ದಾವಣಗೆರೆಯ ಉಮೇಶ್ ಎಕ್ಸಿಕ್ಯೂಟಿವ್ ಇಂಜಿನಿಯರ್, ದಾವಣಗೆರೆಯ ಪ್ರಭಾಕರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಕೋಲಾರದ ವಿಜ್ಜಣ್ಣ ತಹಸಿಲ್ದಾರ್, ಮೈಸೂರಿನ ಮಹೇಶ್ ಸೂಪರ್‍ಡೆಂಟ್ ಇಂಜಿನಿಯರ್ , ಹಾಸನದ ಜಗದೀಶ್ ಗ್ರೇಡ್ ಒನ್ ಸೆಕ್ರೆಟರಿ ಮತ್ತು ಚಿತ್ರದುರ್ಗದ ಜಗದೀಶ್ ಸೂಪರ್‍ಡೆಂಟ್ ಇಂಜಿನಿಯರ್ ಸೇರಿದಂತೆ ಇನ್ನೂ ಇತರೆ ಇಲಾಖೆಯ ಅಧಿಕಾರಿಗಳ ಮನೆಗಳ ತಪಾಸಣೆ ಹಾಗೂ ವಿಚಾರಣೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು