LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಮುನಿಯಪ್ಪ

ಬೆಳಗಾವಿ ಸುವರ್ಣ ವಿಧಾನಸೌಧ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು. ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ.

ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟುರೂ. 2,68,07,872 ಮೌಲ್ಯದ ವಸ್ತುಗಳನ್ನುವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು