LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಚಾನಕ್ಕಾಗಿ ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ ಚಾಲಕ; 35 ಮಂದಿ ಸಾವು, 43 ಜನರಿಗೆ ಗಾಯ

ಬ್ಯಾಂಕಾಕ್: ವ್ಯಕ್ತಿಯೊಬ್ಬ ದಕ್ಷಿಣ ಚೀನಾದ ಝುಹೈನಲ್ಲಿರುವ ಕ್ರೀಡಾ ಕೇಂದ್ರದಲ್ಲಿ ವ್ಯಾಯಾಮ ಮಾಡುತ್ತಿದ್ದ ಜನರ ಮೇಲೆ ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ನುಗ್ಗಿಸಿದ್ದು, ಭೀಕರ ಅಪಘಾತದಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ ಮತ್ತು 43 ಜನ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪೀಪಲ್ಸ್ ಲಿಬರೇಶನ್ ಆರ್ಮಿ ನಗರದಲ್ಲಿ ವಾರ್ಷಿಕವಾಗಿ ಆಯೋಜಿಸಲಾಗುವ ದೇಶದ ಪ್ರಮುಖ ವೈಮಾನಿಕ ಪ್ರದರ್ಶನದ ಮುನ್ನಾದಿನದಂದು ಸೋಮವಾರ ತಡರಾತ್ರಿ ಈ ದಾಳಿ ನಡೆದಿದ್ದು, ದಕ್ಷಿಣ ಚೀನಾದ ಝುಹೈ ನಗರದ ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ 62 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೀನಾ ಅಧಿಕಾರಿಗಳ ಪ್ರಕಾರ, ಪೊಲೀಸರು ಫ್ಯಾನ್ ಎಂಬ ಆತನ ಕುಟುಂಬದ ಹೆಸರಿನಿಂದ ಆರೋಪಿಯನ್ನು ಗುರುತಿಸಿದ್ದಾರೆ. ಕೃತ್ಯದ ಬಳಿಕ ಚಾಲಕ ಚಾಕು ಬಳಸಿ ಆತ್ಮಹತ್ಯೆಗೆ ಮುಂದಾಗಿದ್ದ ಎಂದು ವರದಿಯಾಗಿದೆ.

ಫ್ಯಾನ್ ಕಾರಿನಲ್ಲಿ ಚಾಕು ಪತ್ತೆಯಾಗಿದೆ. ಆತನ ಕುತ್ತಿಗೆಗೆ ಗಾಯಗಳಾಗಿದ್ದು, ಸ್ವಯಂ-ಹಾನಿ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಆರೋಪಿ ಪ್ರಜ್ಞಾಹೀನರಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಡೆದು ಸುಮಾರು 24 ಗಂಟೆಗಳ ಕಾಲ, ಸಾವು ಅಥವಾ ಗಾಯದ ಸಂಖ್ಯೆ ಎಷ್ಟು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಚಿಕಿತ್ಸೆಗಾಗಿ ಜನರನ್ನು ನಾಲ್ಕು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಸೋಮವಾರ ವರದಿ ಮಾಡಿದೆ.

ಮಂಗಳವಾರ ಬೆಳಗ್ಗೆ ಚೀನೀ ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ಹುಡುಕಾಟಗಳ ಬಗ್ಗೆ ಚೀನಾ ಸೆನ್ಸಾರ್‌ ಮಾಡಿದೆ. ಸಾಮಾಜಿಕ ಜಾಲತಾಣ Weibo ನಲ್ಲಿ ಈ ಘಟನೆಯ ಬಗ್ಗೆ ಸರ್ಚ್‌ ಮಾಡಿದರೆ ಕೇವಲ ಒಂದೆರಡು ಚಿತ್ರಗಳು ಮಾತ್ರ ಕಾಣುತ್ತಿದೆ.

ಸೋಮವಾರ ರಾತ್ರಿಯಿಂದಲೇ ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಪೋಸ್ಟ್‌ಗಳನ್ನು ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಮುಂದಿನ ಸೂಚನೆ ಬರುವವರೆಗೆ ವ್ಯಾಯಾಮ ಕೇಂದ್ರವನ್ನು ಬಂದ್‌ ಮಾಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು