LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅತಿಶಿ, ಕೇಜ್ರಿವಾಲ್ ಗಿಂತ 'ಸಾವಿರ ಪಟ್ಟು ಉತ್ತಮ: ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಮೊದಲ ಬಾರಿ ಹೊಗಳಿದ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು, ಹಿಂದಿನ ಸಿಎಂ ಅರವಿಂದ್ ಕೇಜ್ರಿವಾಲ್‌ಗಿಂತ "ಸಾವಿರ ಪಟ್ಟು ಉತ್ತಮ" ಎಂದು ಶುಕ್ರವಾರ ಹೇಳಿದ್ದಾರೆ.

ಇಂದು ಇಂದಿರಾಗಾಂಧಿ ದೆಹಲಿ ಮಹಿಳಾ ತಾಂತ್ರಿಕ ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಕ್ಸೇನಾ, ‘ದಿಲ್ಲಿಯ ಸಿಎಂ ಮಹಿಳೆಯಾಗಿರುವುದು ನನಗೆ ಸಂತಸ ತಂದಿದೆ ಮತ್ತು ಅವರು ತಮ್ಮ ಹಿಂದಿನ ಸಿಎಂಗಿಂತ ಸಾವಿರ ಪಟ್ಟು ಉತ್ತಮರು ಎಂದು ಆತ್ಮವಿಶ್ವಾಸದಿಂದ ಹೇಳಬಲ್ಲೆ’ ಎಂದರು.

ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ದೆಹಲಿ ಸಿಎಂ ಅನ್ನು ಹೊಗಳುವಾಗ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಶಿಯವರತ್ತ ನೋಡಿದರು.

ಸಕ್ಸೇನಾ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ, "ನಿಮ್ಮ ಮುಂದೆ ನಾಲ್ಕು ಮಾರ್ಗದರ್ಶಿ ನಕ್ಷತ್ರಗಳಿವೆ. ಮೊದಲನೆಯದು ನಿಮಗೆ ನಿಮ್ಮ ಬಗ್ಗೆ ಜವಾಬ್ದಾರಿ, ಎರಡನೆಯದು ನಿಮ್ಮ ಪೋಷಕರು ಮತ್ತು ಕುಟುಂಬದ ಬಗೆಗಿನ ಜವಾಬ್ದಾರಿ ಮತ್ತು ಮೂರನೆಯ ಜವಾಬ್ದಾರಿ ಸಮಾಜ ಮತ್ತು ರಾಷ್ಟ್ರ ನಿರ್ಮಾಣದ ಕಡೆಗೆ" ಎಂದರು.

ಇನ್ನು ನಾಲ್ಕನೇ ಜವಾಬ್ದಾರಿ, ಲಿಂಗ ತಾರತಮ್ಯ ಮೆಟ್ಟಿ ನಿಂತು ಎಲ್ಲಾ ಕ್ಷೇತ್ರಗಳಲ್ಲಿ ಇತರರಿಗೆ ಸರಿಸಮಾನವಾಗಿ ನಿಲ್ಲುವ ಮಹಿಳೆ ಎಂದು ಸಾಬೀತುಪಡಿಸುವುದು ಎಂದು ಅವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು