LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅದಾನಿ ವಿರುದ್ಧ ಅರೆಸ್ಟ್ ವಾರಂಟ್

ನ್ಯೂಯಾರ್ಕ್: ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪ ದಾಖಲಾಗಿವೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಪ್ರಮುಖವಾಗಿ ಕೇಳಿಬಂದಿದೆ. ಕೆನಡಾದ ಪೆನ್ಷನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗು ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಆದ ಸೈರಿಲ್ ಕೆಬನೆಸ್ ಅವರೂ ಆರೋಪಿತರಲ್ಲಿ ಸೇರಿದ್ದಾರೆ.

ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರು ಈ ಪ್ರಕರಣದಲ್ಲಿ ತಳುಕುಹಾಕಿಕೊಂಡಿರುವ ಇತರೆ ವ್ಯಕ್ತಿಗಳು.ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್‍ಇಸಿ ನ್ಯೂಯಾರ್ಕ್‍ನ ಡಿಸ್ಟ್ರಿಕ್ಟ್ ಕೋರ್ಟ್‍ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧಸಿವಿಲ್ ಚಾರ್ಜ್ ಹಾಕಿದೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ರಾಯ್ಟರ್ಸ್ ಸುದ್ದಿಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.
ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್‍ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು