LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅದಾನಿ, ಸಂಭಾಲ್ ಹಿಂಸಾಚಾರ ಬಗ್ಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆ, ರಾಜ್ಯಸಭೆ ದಿನದ ಮಟ್ಟಿಗೆ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿವಾದ ಹಾಗೂ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಇತ್ತೀಚಿಗೆ ಸಂಭವಿಸಿದ ಹಿಂಸಾಚಾರ, ಮತ್ತಿತರ ವಿಚಾರಗಳ ಚರ್ಚೆಗೆ ವಿರೋಧ ಪಕ್ಷಗಳು ಇಂದು ಕೂಡಾ ಪ್ರತಿಭಟನೆ ಮುಂದುವರೆಸಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಹಾಗೂ ರಾಜ್ಯಸಭೆಯನ್ನು ದಿನದ ಮಟ್ಟಿಗೆ ಸೋಮವಾರ ಮುಂದೂಡಲಾಯಿತು.

ವಾರಾಂತ್ಯದ ವಿರಾಮದ ಬಳಿಕ ಲೋಕಸಭೆ ಸಮಾವೇಶಗೊಳ್ಳುತ್ತಿದ್ದಂತೆಯೇ, ಕಾಂಗ್ರೆಸ್ ಸೇರಿದಂತೆ ಅನೇಕ ವಿಪಕ್ಷಗಳ ಸದಸ್ಯರು, ಲಂಚ ಪ್ರಕರಣದಲ್ಲಿ ಅಮೆರಿಕಾ ನ್ಯಾಯಾಲಯದಿಂದ ಉದ್ಯಮಿ ಗೌತಮ್ ಅದಾನಿಗೆ ಬಂಧನದ ವಾರೆಂಟ್ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದರು.

ಕೆಲ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರೆ, ಮತ್ತೆ ಕೆಲವರು ಘೋಷಣೆ ಕೂಗಿ ಗದ್ದಲವನ್ನುಂಟು ಮಾಡಿದರು. ಪ್ರಶ್ನೋತರ ಅವಧಿಗೆ ಅವಕಾಶ ಮಾಡಿಕೊಡಿ ನಂತರ ಅವರು ಪ್ರಸ್ತಾಪಿಸಿದ ವಿಚಾರವನ್ನು ಚರ್ಚೆಗೆ ಕೈಗೆತ್ತಿಕೊಳ್ಳುತ್ತಿದಾಗಿ ಸ್ಪೀಕರ್ ಓಂ ಬಿರ್ಲಾ ಪ್ರತಿಪಕ್ಷಗಳ ಸದಸ್ಯರಿಗೆ ಮನವಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು