LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಅಧಿವೇಶನದ ಮೊದಲ ದಿನವೇ ಸುರ್ವಣಸೌಧ ಸಾಲು ಸಾಲು ಪ್ರತಿಭಟನೆಗೆ ಸಾಕ್ಷಿಯಾಗುತ್ತಿದೆ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸುರ್ವಣಸೌಧ ಸಾಲು ಸಾಲು ಪ್ರತಿಭಟನೆಗೆ ಸಾಕ್ಷಿಯಾಗುತ್ತಿದೆ. 11 ವಿವಿಧ ಸಂಘಟನೆಗಳು, ತಮ್ಮ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ. ಬೆಳಗಾವಿಯಲ್ಲಿ ಅಧಿವೇಶನದ ಹೊತ್ತಲ್ಲೇ ಮತ್ತೆ ಪಂಚಮಸಾಲಿ ಸಮುದಾಕ್ಕೆ 2A ಮೀಸಲಾತಿಗಾಗಿ ರಣಕಹಳೆ ಮೊಳಗಿಸಲಾಗಿದೆ. ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು. ಅಷ್ಟೇ ಅಲ್ಲ ಟ್ರ್ಯಾಕ್ಟರ್ ಚಲೋಗೆ ಕರೆ ನೀಡಲಾಗಿತ್ತು.

ಆದರೆ, ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ಶಾಕ್ ಕೊಟ್ಟಿದೆ. ಇಂದು ಮತ್ತು ನಾಳೆ ಹೋರಾಟದ ವಾಹನಗಳಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಮಾಡಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವವನ್ನೇ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಆದರೆ, ಬಿಜೆಪಿ ನಾಯಕರ ಆರೋಪವನ್ನು ಸಚಿವರು ತಳ್ಳಿ ಹಾಕಿದ್ದಾರೆ.

ಯತ್ನಾಳ್  ಮಾತನಾಡಿ ಪಂಚಮಸಾಲಿ ಸಮುದಾಯಕ್ಕೆ ನೂರಕ್ಕೆ ನೂರರಷ್ಟು ಮೀಸಲಾತಿ ಸಿಗುತ್ತದೆ ಎಂದಿದ್ದಾರೆ. ನಮ್ಮ ಸಮುದಾಯದ ಮೇಲೆ ಗುಂಡು ಹಾಕುವ ತಾಕತ್ತು ಈ ಸರ್ಕಾರಕ್ಕೆ ಇದೆಯಾ ಎಂದು ಯತ್ನಾಳ್ ಗುಡುಗಿದ್ದಾರೆ.

ಈ ಮಧ್ಯೆ ಮಹದಾಯಿ ಯೋಜನೆ ಅನುಷ್ಠಾನ ಮಾಡಬೇಕು, ಕಬ್ಬಿನ ಬಿಲ್ ನಿಗದಿ ಮಾಡಬೇಕು, ವಕ್ಫ್​​ನಿಂದ ರೈತರ ಜಮೀನು ರಕ್ಷಣೆಗೆ ಒತ್ತಾಯಿಸಿ, ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಎಸ್​ಆರ್​ಟಿಸಿ ಲೇಬರ್ ನಿಗಮ ಸಂಘ, ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಸಂಘ ಪ್ರತಿಭಟನೆಗೆ ಮುಂದಾಗಿದೆ. ಗದಗ ಹರಪನಹಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ ಸೇರಿದಂತೆ ಹೀಗೆ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು